ಬಸ್ಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು ಸೋಮಂತಡ್ಕದಲ್ಲಿ ನಡೆದಿದ್ದ ಘಟನೆ

 

ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ಮಂಗಳೂರು ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಡಿರುದ್ಯಾವರ ಗ್ರಾಮದ ಯೋಗೀಶ(39) ಎಂಬವರು ರಸ್ತೆ ದಾಟುತ್ತಿದ್ದ ಸಂದರ್ಭ ಮಂಗಳೂರಿನಿಂದ ಚಾರ್ಮಾಡಿ ಮೂಲಕ ಬಳ್ಳಾರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಘಟನೆ ಬುಧವಾರ ಸಂಜೆ ನಡೆದಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಸಲಾಗಿತ್ತು.ಅದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಸಂಜೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!