ಜಾಗದ ವಿವಾದ ಅರೆನಗ್ನಗೊಳಿಸಿ ಮಹಿಳೆಗೆ ಹಿಂಸೆ ಆರೋಪಿಸಿ ಠಾಣೆಗೆ ದೂರು.

 

 

ಬೆಳ್ತಂಗಡಿ: ಸರಕಾರಿ ಜಮೀನಿನಲ್ಲಿ ನಿವೇಶನದ ವಿಚಾರವನ್ನು ಮುಂದಿಟ್ಟುಕೊಂಡು ತಂಡವೊಂದು, ಆದಿವಾಸಿ ಸಮುದಾಯದ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಬಟ್ಟೆ ಹರಿದು ಅರೆನಗ್ನ ಗೊಳಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಉಜಿರೆಯಲ್ಲಿ ನಡೆದಿದೆ.

ಉಜಿರೆ ಸಮೀಪದ ಅಳಕೆ ನಿವಾಸಿಗಳಾದ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರು ಈ ಕೃತ್ಯವನ್ನು ಎಸಗಿದ್ದಾರೆ ಎಂದು ಆರೋಪಿಸಿ ಅವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಎ.19 ರಂದು ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸಲ್ಲಿಸಿದ್ದ 94ಸಿ ಅರ್ಜಿಯ ಅಳತೆಗೆಂದು
ಅಧಿಕಾರಿಗಳು ಬಂದಿದ್ದರು ಈ ಸಂದರ್ಭದಲ್ಲಿ ಜಾಗದ ಬಗ್ಗೆ ಇನ್ನೊಂದು ತಂಡ ತಕರಾರು ತೆಗೆದಿದೆ. ಇದರಿಂದಾಗಿ ಅಳತೆಗೆ ಬಂದವರು ಅಳತೆ ಸಾದ್ಯವಿಲ್ಲ ಎಂದು ಬಿಟ್ಟು ಹೋಗಿದ್ದಾರೆ ಅಧಿಕಾರಿಗಳು ತೆರಳಿದ ಬಳಿಕ ಸಾರ್ವಜನಿಕ ರಸ್ತೆಯಲ್ಲಿ ನಿಂತಿದ್ದ ಮಹಿಳೆಯರ ಮೇಲೆ ಆರೋಪಿಗಳು ಹಲ್ಲೆ ನಡೆಸಲು ಮುಂದಾದಗ ತಡೆಯಲು ಬಂದ್ದ ಇನ್ನಿತರರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದೌರ್ಜನ್ಯಕ್ಕಿಡಾದ ಮಹಿಳೆಯರು ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

error: Content is protected !!