ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

 

 

 

ಬೆಳ್ತಂಗಡಿ: ಗ್ರಾಮ ಪಂಚಾಯತ್ ಲಾಯಿಲ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸ್ಚಚ್ಛತಾ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

 

 

ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು  ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಛ ಪ್ರಸ್ತಾವನೆಗೈದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್ ಆರ್. ಸೇರಿದಂತೆ ಪಂಚಾಯತ್ ಸದಸ್ಯರುಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಸಮಗ್ರ ಸಂಜೀವಿನಿ ಸ್ರ್ರೀ ಶಕ್ತಿ ಮಹಿಳಾ ಸಂಘದ ಅಧ್ಯಕ್ಷೆ ಯಶೋದ ರಾಘವೇಂದ್ರ ನಗರ ಸಂಘದ ಸದಸ್ಯರುಗಳು , ಪಂಚಾಯತ್ ಸಿಬ್ಬಂದಿಗಳು ವಿವಿಧ ಸಂಘ ಸಂಸ್ಥೆಗಳ ಸದಸ್ಯರು  ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ಯಶೋಧರ ಶೆಟ್ಟಿ ಧನ್ಯವಾದವಿತ್ತರು.ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಕಡೆಗಳಲ್ಲಿ ರಸ್ತೆ ಬದಿಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಹಾಗೂ ಬಾಟಲಿಗಳನ್ನು ತೆರವುಗೊಳಿಸಿ ಸ್ವಚ್ಚ ಗೊಳಿಸಲಾಯಿತು.

error: Content is protected !!