ನವೆಂಬರ್ ತಿಂಗಳಿನಿಂದ ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಕಾಮಗಾರಿ ಪ್ರಾರಂಭ ಗ್ರಾಮದ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರವೂ ಅಗತ್ಯ: ಶಾಸಕ ಹರೀಶ್ ಪೂಂಜ ಉಜಿರೆ ಗ್ರಾ.ಪಂ ವಿವಿಧ ಕಾಮಗಾರಿಗಳ ಉದ್ಘಾಟನೆ

 

 

ಬೆಳ್ತಂಗಡಿ: ಇಡೀ ರಾಜ್ಯಕ್ಕೆ ಮಾದರಿಯಾಗುವಂತಹ ರೀತಿಯಲ್ಲಿ ಬೆಳ್ತಂಗಡಿ ತಾಲೂಕು ಅಭಿವೃದ್ಧಿ ಕಳೆದ ನಾಲ್ಕು ವರುಷಗಳಿಂದ ಹೊಂದುತಿದ್ದು ಇನ್ನಷ್ಟು ಅಭಿವೃದ್ಧಿ ಕೆಲಸಗಳು ಮುಂದುವರಿಯಲಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು ಅವರು ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ವಿವಿಧ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಗ್ರಾಮವೊಂದರ ಅಭಿವೃದ್ಧಿ ಜನಪ್ರತಿನಿಧಿ ಸರಕಾರದಿಂದ ಮಾತ್ರ ಸಾಧ್ಯವಿಲ್ಲ. ಅದಕ್ಕೆ ಗ್ರಾಮಸ್ಥರ ಸಹಕಾರದ ಅಗತ್ಯವೂ ಇದೆ. ಅತಿ ಹೆಚ್ಚು ಮತದಾರರನ್ನು ಹೊಂದಿರುವ ಉಜಿರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು,ಸಂಘ ಸಂಸ್ಥೆಗಳು ಈ ನಿಟ್ಟಿನಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ಪರಿವರ್ತನೆಗೆ ಬಲ ತುಂಬುತ್ತಿರುವುದು ಶ್ಲಾಘನೀಯ.

 

 

ತಾಲೂಕಿನ 81 ಗ್ರಾಮಗಳ 241 ಬೂತ್ ಗಳಲ್ಲಿ ಅಭಿವೃದ್ಧಿ ಕಾಮಗಾರಿ ನಡೆದಿದ್ದು, ತಾಲೂಕಿನಲ್ಲಿ 34 ಕಿಂಡಿ ಅಣೆಕಟ್ಟುಗಳು ನಿರ್ಮಾಣಗೊಂಡಿವೆ.14 ಕಿಂಡಿ ಅಣೆಕಟ್ಟುಗಳು ನಿರ್ಮಾಣ ಹಂತದಲ್ಲಿವೆ. ಉಜಿರೆಯ ಬದನಾಜೆ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರ್ಪಡೆಗೊಳಿಸಲಾಗಿದೆ. ತಾಲೂಕಿಗೆ ಒಂದು ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಗ್ರಂಥಾಲಯ ನಿರ್ಮಾಣಗೊಳ್ಳಲಿದೆ. ಉಜಿರೆಯ ಅತ್ತಾಜೆ ಕೆರೆಯನ್ನು 1.5 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿ ಸುಸಜ್ಜಿತ ಉದ್ಯಾನವನವನ್ನು ನಿರ್ಮಿಸಿ ಜನವರಿ ತಿಂಗಳಲ್ಲಿ ಲೋಕಾರ್ಪಣೆ ಗೊಳಿಸಲಾಗುವುದು ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆಗೆ 718 ಕೋಟಿ ರೂ ಅನುದಾನ ಮಂಜೂರಾಗಿದ್ದು ನವೆಂಬರ್ ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ಕಾಶಿಬೆಟ್ಟು-ಅರಳಿ ರಸ್ತೆಗೆ 6 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಯೋಜನೆ ರೂಪಿಸಲಾಗಿದೆ. ಉಜಿರೆ- ಪೆರ್ಲ ರಸ್ತೆಯು 2.5 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಹೊಂದಲಿದೆ.ಉಜಿರೆ ಕಾಲೇಜು ರಸ್ತೆಯನ್ನು 5.5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಉಜಿರೆಗೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸುವ ಯೋಜನೆ ರೂಪಿಸಲಾಗಿದೆ ಎಂದು ಶಾಸಕರು ಹೇಳಿದರು.

 

 

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಮಾತನಾಡಿ ಕಳೆದ 7 ವರ್ಷಗಳಲ್ಲಿ ಕೇಂದ್ರ ಸರಕಾರವು ಹಲವು ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು.
ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಶುಭಹಾರೈಸಿದರು.
ಗ್ರಾಪಂ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಜಿರೆ ಜನಾರ್ದನ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ನಾಯ, ತಹಶೀಲ್ದಾರ್ ಮಹೇಶ್ ಜೆ,ತಾಪಂ ಇಒ ಕುಸುಮಾಧರ ಬಿ, ಜಿಲ್ಲಾ ಮುಖ್ಯ ಗ್ರಂಥಪಾಲಕಿ ಗಾಯತ್ರಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಸೂರ್ಯನಾರಾಯಣ ಭಟ್,ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್, ಪ್ರೇರಣಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಶೀಲಾವತಿ,ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ, ಜಿಪಂ ಮಾಜಿ ಅಧ್ಯಕ್ಷ ಕೊರಗಪ್ಪ ನಾಯ್ಕ್, ತಾಪಂ ಮಾಜಿ ಸದಸ್ಯ ಶಶಿಧರ ಕಲ್ಮಂಜ,ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.
ಉಪಾಧ್ಯಕ್ಷ ರವಿ ಬರೆಮೇಲು ಸ್ವಾಗತಿಸಿದರು.ತಾಪಂ ಸಂಯೋಜಕ ಜಯಾನಂದ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಪ್ರಾಸ್ತಾವಿಕವಾಗಿ ಮಾತನಾಡಿದರು.

 

 

ಉದ್ಘಾಟನೆಗೊಂಡ ವಿವಿಧ ಕಾಮಾಗಾರಿಗಳು

ದಕಜಿಪಂ,ತಾಪಂ ಬೆಳ್ತಂಗಡಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಮಂಗಳೂರು, ಮಹಿಳಾಮತ್ತುಮಕ್ಕಳಅಭಿವೃದ್ಧಿಇಲಾಖೆ, ಗ್ರಾಪಂ ಉಜಿರೆ, ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ಇವರ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಜಿಟಲ್ ಗ್ರಂಥಾಲಯ,ಮಾಹಿತಿ ಕೇಂದ್ರ,ಗ್ರಾಮೀಣ ಹಳ್ಳಿ ಸಂತೆ ಪ್ರಾಂಗಣ, ಅಮೃತ ಉದ್ಯಾನವನ, ಮೀನು ಮಾರುಕಟ್ಟೆ ಕಟ್ಟಡ, ಮಾಪಲ ಹಾಗೂ ದೊಂಪದಪಲ್ಕೆ ಅಂಗನವಾಡಿ ಕಟ್ಟಡ, ಶಿವಾಜಿನಗರ ಕ್ರಾಸ್ ನ ಹೈಮಾಸ್ಟ್ ಸೋಲಾರ್ ದೀಪ, ಆಧಾರ್ ಕೇಂದ್ರ, ಉಜಿರೆ ಬಸ್ ನಿಲ್ದಾಣ ಬಳಿಯ ವಾಣಿಜ್ಯ ಸಂಕೀರ್ಣ ಉದ್ಘಾಟನೆಗೊಂಡಿತು.

error: Content is protected !!