ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಇದರ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ

 

 

ಬೆಳ್ತಂಗಡಿ: ತಾಲೂಕು ಛೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ (ವರ್ತರ ಸಂಘ) ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಎ 30 ರಂದು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಹೇಳಿದರು. ಅವರು ಬೆಳ್ತಂಗಡಿ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಇದೇ ಬರುವ ಎಪ್ರಿಲ್ 30 ಶನಿವಾರ ಗುರುವಾಯನಕೆರೆ ಬಂಟರ ಭವನದಲ್ಲಿ ಸಂಜೆ 6-30ಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ವಹಿಸಿಕೊಳ್ಳಲಿದ್ದಾರೆ.ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರುಗಳಾದ ಹರೀಶ್ ಕುಮಾರ್ ಮತ್ತು ಪ್ರತಾಪಸಿಂಹ ನಾಯಕ್ ಹಾಗೂ ಶಶಿಧರ ಪೈ, ಮಾರೂರು ಅಧ್ಯಕ್ಷರು ಕೆನರಾ ಛೇಂಬರ್ ಆಫ್ ಕಾಮರ್ಸ್ ಮಂಗಳೂರು  ಇವರು ಭಾಗವಹಿಸಲಿದ್ದಾರೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ ಇದರ ಕಾರ್ಯದರ್ಶಿ ರೋನಾಲ್ಡ್ ಲೊಬೋ, ಉಪಾಧ್ಯಕ್ಷ ಹ್ಯಾರಿಸ್, ಖಜಾಂಚಿ ಸುನೀಲ್ ಶೆಣೈ ಉಪಸ್ಥಿತರಿದ್ದರು.

error: Content is protected !!