ಬೆಂಗಳೂರು ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಧರ್ಮಸ್ಥಳದಲ್ಲಿ ಹೃದಯಾಘಾತದಿಂದ  ನಿಧನ.

 

 

ಬೆಳ್ತಂಗಡಿ : ಬೆಂಗಳೂರು ಉತ್ತರದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಧರ್ಮಸ್ಥಳದಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಬೆಂಗಳೂರು ಜಿಲ್ಲೆಯ ಯಲಹಂಕ ಮತ್ತು ಬಂಡಿಕೊಡಿಗೆಹಳ್ಳಿಯಲ್ಲಿರುವ ಶ್ರೀ ಜ್ಞಾನಕ್ಷಿ ವಿದ್ಯಾ ಮಂದಿರದ‌ ಮಾಲಕ ಹಾಗೂ ಬೆಂಗಳೂರು ಉತ್ತರ ವಲಯದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿರುವ ಡಾ. ನರೇಂದ್ರ ಕುಮಾರ್(45) ನಿನ್ನೆ ಬೆಂಗಳೂರಿನಿಂದ ತಮ್ಮ ಶಾಲೆಯ ಶಿಕ್ಷಕಿಯರನ್ನು ಪುತ್ತೂರು ವಿವೇಕಾನಂದ ಕಾಲೇಜಿಗೆ ತರಬೇತಿಗಾಗಿ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳು ಮತ್ತು ಸ್ನೇಹಿತರೊಂದಿಗೆ ವಾಹನಲ್ಲಿ ಬಂದಿದ್ದು ನಂತರ ಶಿಕ್ಷಕಿಯರನ್ನು ಬಿಟ್ಟು ತಮ್ಮ ಪತ್ನಿ‌ ಮಕ್ಕಳು ಸೇರಿ ಏಳು ಮಂದಿ ಧರ್ಮಸ್ಥಳ ಸನ್ನಿಧಿ ವಸತಿ ಗೃಹದಲ್ಲಿ ತಂಗಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದರ್ಶನ ಪಡೆದು ವಾಪಸ್ ಬೆಂಗಳೂರು ಹೋಗುವುದಾಗಿ ನಿರ್ಧರಿಸಿದ್ದರು. ಇಂದು ಬೆಳಗ್ಗೆ ಏಕಾಏಕಿ ಡಾ.ನರೇಂದ್ರ ಕುಮಾರ್ ಗೆ ಎದೆನೋವು ಕಾಣಿಸಿದೆ ಕೂಡಲೇ ವಾಹನದ ಚಾಲಕನಿಗೆ ಮಕ್ಕಳು ಕರೆ ಮಾಡಿ ವಿಷಯ ತಿಳಿಸಿದಾಗ ಗೆಸ್ಟ್ ಹೌಸ್ ಗೆ ಚಾಲಕ ವಾಹನ ತಂದಾಗ ಡಾ.ನರೇಂದ್ರ ಕುಮಾರ್ ನಡೆದುಕೊಂಡು ಬಂದು ವಾಹನ ಹತ್ತಿ ಕುಳಿತು ನೇತ್ರಾವತಿ ಸಮೀಪ ಆಸ್ಪತ್ರೆಗೆ ತೆರಳುವ ಸಂದರ್ಭ ವಾಹನದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಡಾ.ನರೇಂದ್ರ ಕುಮಾರ್ ಅವರ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಶವಪರೀಕ್ಷೆಗೆ ತರಲಾಗಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಾ. ನರೇಂದ್ರ ಕುಮಾರ್ ಅವರ ಪತ್ನಿ ಸಂದರ್ಶಿನಿ ಶ್ರೀ ಜ್ಞಾನಕ್ಷಿ ವಿದ್ಯಾ ಕೇಂದ್ರದಲ್ಲಿ ಪ್ರಾಂಶುಪಾಲರಾಗಿದ್ದಾರೆ.

ಡಾ.ನರೇಂದ್ರ ಕುಮಾರ್ ಮತ್ತು ಸಂದರ್ಶಿನಿ ದಂಪತಿಗಳಿಗೆ ಪ್ರಜ್ವಲ್ (14) ಮತ್ತು ಕಶಿಕಾ(8) ಇಬ್ಬರು ಮಕ್ಕಳು ಇದ್ದಾರೆ.

error: Content is protected !!