ವರ್ಗಾವಣೆಗೊಂಡ ನ್ಯಾಯಾಧೀಶರುಗಳಿಗೆ ಬೀಳ್ಕೊಡುಗೆ ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಆಯೋಜನೆ

 

 

 

ಬೆಳ್ತಂಗಡಿ: ಕಳೆದ 3 ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ವಿಭಾಗದ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿ ವರ್ಗಾವಣೆಗೊಂಡ ನಾಗೇಶಮೂರ್ತಿ ಬಿ.ಕೆ ಮತ್ತು ಪ್ರಧಾನ ಸಿವಿಲ್ ನ್ಯಾಯಾದೀಶರಾಗಿ ಕಾರ್ಯ ನಿರ್ವಹಿಸಿ ವರ್ಗಾವಣೆಗೊಂಡ ಸತೀಶ ಕೆ. ಜಿ ಇವರಿಗೆ ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮ ವಕೀಲರ ಸಂಘದ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಪ್ರಸಾದ್ ಕೆ.ಎಸ್.ವಹಿಸಿದ್ದರು.

 

 

ವಕೀಲರುಗಳಾದ ಅಲೋಶಿಯಸ್ ಲೋಬೋ, ಸೇವಿಯರ್ ಪಾಲೇಲಿ, ಬಿ.ಕೆ. ಧನಂಜಯ ರಾವ್  ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ನ್ಯಾಯಾಧೀಶರುಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

 

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಣೇಶ್ ಗೌಡ,ಸೀನಿಯರ್ ಕಮಿಟಿ ಚೆಯರ್ ಮೇನ್ ಸುಬ್ರಹ್ಮಣ್ಯ ಅಗರ್ತ, ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಶೈಲೇಶ್ ಆರ್. ಠೋಸರ್ ಸ್ವಾಗತಿಸಿ ಕೋಶಾಧಿಕಾರಿ ಹರಿಪ್ರಕಾಶ್ ಪಿ.ಎನ್.ವಂದಿಸಿದರು. ಮನೋಹರ್ ಇಳಂತಿಲ ಕಾರ್ಯಕ್ರಮ ನಿರೂಪಿಸಿದರು.

 

 

error: Content is protected !!