2022ನೇ ಸಾಲಿನ ಎಸ್​ಎಸ್​ಎಲ್​​ಸಿ ಪರೀಕ್ಷೆ ಫಲಿತಾಂಶ ಪ್ರಕಟ ಶೇ 85.63% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

 

 

ಬೆಂಗಳೂರು: ಬಹು ನಿರೀಕ್ಷಿತ 2022ನೇ ಸಾಲಿನ ಎಸ್​ಎಸ್​ಎಲ್​​ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. 8,53,436 ವಿದ್ಯಾರ್ಥಿಗಳು ಹಾಜರಾಗಿದ್ದು, ಶೇ. 85.63% ಫಲಿತಾಂಶ ಬಂದಿದೆ. 81.03ರಷ್ಟು ಬಾಲಕರು ಹಾಗೂ ಶೇ. 90.29ರಷ್ಟು ಪಾಸ್​ ಆಗಿರುವ ವಿದ್ಯಾರ್ಥಿನಿಯರು ಮತ್ತೊಮ್ಮೆ ಮೇಲುಗೈ ಸಾಧಿಸಿದ್ದಾರೆ.
ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿದ ಸಚಿವ ನಾಗೇಶ್​ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದರು. 8,53,436 ಬರೆದಿದ್ದು, 730,881 ಮಕ್ಕಳು ಪಾಸ್​ ಆಗಿದ್ದು, ಶೇ. 85.63 ತೇರ್ಗಡೆ ಹೊಂದಿದಂತಾಗಿದೆ. ಕಳೆದ 10 ವರ್ಷಗಳಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಪಾಸ್​ ಆಗಿದ್ದಾರೆ. 145 ಮಕ್ಕಳು 625ಕ್ಕೆ 625 ಅಂಕ ಪಡೆದಿದ್ದಾರೆ. 309 ಮಕ್ಕಳು 624 ಅಂಕ ಪಡೆದು ತೇರ್ಗಡೆಯಾಗಿದ್ದಾರೆ ಎಂದು ತಿಳಿಸಿದರು.ಈ ವರ್ಷ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್ಎಸ್ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಸಲ 15,387 ಶಾಲೆಗಳಿಂದ 8,73,859 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ರಾಜ್ಯಾದ್ಯಂತ 3,444 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು ಎಂದು ಸಚಿವರು ತಿಳಿಸಿದರು.
ಮಧ್ಯಾಹ್ನ 1 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದ್ದು, https://karresults.nic.in/ ಮೂಲಕ ನೋಡಬಹುದಾಗಿದೆ. ಅಲ್ಲದೆ, ಮಧ್ಯಾಹ್ನ ಆಯಾ ಶಾಲೆಗಳಲ್ಲೂ ಫಲಿತಾಂಶ ಲಭ್ಯವಿರಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೂ ಎಸ್‌ಎಂಎಸ್‌ ಮೂಲಕ ಫಲಿತಾಂಶ ತಲುಪಲಿದೆ.

error: Content is protected !!