ಕಣಿಯೂರು ಗ್ರಾಮ ಪಂಚಾಯತ್ ಉಪ ಚುನಾವಣೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ ಎ. ಗಾಣಿಗ ಗೆಲುವು

 

 

 

ಬೆಳ್ತಂಗಡಿ:ಕಣಿಯೂರು  ಗ್ರಾಮ ಪಂಚಾಯಿತಿಯಲ್ಲಿ ಉಪಾಧ್ಯಕ್ಷರಾಗಿದ್ದ ಸುನೀಲ್ ಸಾಲ್ಯಾನ್ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ ನಡೆದ  ಉರುವಾಲು ವಾರ್ಡ್-2 ರ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ ಎ ಗಾಣಿಗ ಜಯ ಗಳಿಸಿದ್ದಾರೆ.ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಜೇಶ್ ಗಾಣಿಗ 470 ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಯೋಗೀಶ್ 330 ಮತಗಳನ್ನು ಪಡೆದುಕೊಂಡಿದ್ದಾರೆ 9 ಮತಗಳು ತಿರಸ್ಕೃತ ಗೊಂಡಿವೆ. 140 ಮತಗಳ ಅಂತರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಜಯಗಳಿಸಿದ್ದಾರೆ.

error: Content is protected !!