ಪಿಎಂ ಕಿಸಾನ್ ನಿಧಿ 11 ನೇ ಕಂತು ರಿಲೀಸ್ ಮಾಡಿದ ಪ್ರಧಾನಿ ನರೇಂದ್ರ ಮೋದಿ

 

 

ದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷ ಪೂರ್ಣಗೊಳಿಸಿದ ಬೆನ್ನಲ್ಲೇ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 11ನೇ ಕಂತಿನ ಹಣ ರಿಲೀಸ್ ಮಾಡಲಾಗಿದೆ. ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಬರೋಬ್ಬರಿ 21,000 ಕೋಟಿ ರೂಪಾಯಿ ವರ್ಗಾವಣೆ ಮಾಡಿದ್ದಾರೆ.
ಒಟ್ಟು 10 ಕೋಟಿ ಅನ್ನದಾತರ ಖಾತೆಗಳಿಗೆ ನೇರವಾಗಿ 2 ಸಾವಿರ ರೂಪಾಯಿ ನಗದು ಜಮಾವಣೆಗೊಳ್ಳಲಿದೆ. ಈ ಯೋಜನೆಗಾಗಿ ಇಲ್ಲಿಯವರೆಗೆ 2 ಲಕ್ಷ ಕೋಟಿ ರೂಪಾಯಿಗೂ ಅಧಿಕ ಮೊತ್ತ ವೆಚ್ಚ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸಣ್ಣ ಹಿಡುವಳಿದಾರರಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ನೀಡುವುದಾಗಿ ಘೋಷಣೆ ಮಾಡಿದ್ದು, ನಾಲ್ಕು ತಿಂಗಳಿಗೊಮ್ಮೆ ನೇರವಾಗಿ ರೈತರ ಖಾತೆಗಳಿಗೆ 2 ಸಾವಿರ ಹಣ ಜಮಾವಣೆ ಆಗುತ್ತಿದೆ. ಇದಕ್ಕೆ ಕರ್ನಾಟಕ ಸರ್ಕಾರ 4 ಸಾವಿರ ರೂ. ಹಣ ನೀಡುತ್ತಿದೆ.ಈ ಹಿಂದೆ 10ನೇ ಕಂತಿನ ಹಣ ಬಿಡುಗಡೆ ಮಾಡಿದಾಗ ಕೆಲ ರೈತರ ಖಾತೆಗಳಿಗೆ ಹಣ ಜಮಾವಣೆಗೊಂಡಿರಲಿಲ್ಲ. ಇದೀಗ ಎರಡು ಕಂತಿನ ಹಣ ಒಟ್ಟಿಗೆ ಜಮಾವಣೆಯಾಗಲಿದೆ ಎಂದು ತಿಳಿದು ಬಂದಿದೆ. ಒಂದು ವೇಳೆ ಹಣ ಬಾರದಿದ್ದರೆ 155261 ಅಥವಾ 011-24300606 ನಂಬರ್​ಗೆ ಫೋನ್ ಮಾಡಿ, ಮಾಹಿತಿ ಪಡೆದುಕೊಳ್ಳಬಹುದುದಾಗಿದೆ.

ಹಣ ಬಂದಿರುವ ಬಗ್ಗೆ ಪರಿಶೀಲನೆ ಮಾಡುವುದು ಹೇಗೆ!?: https://pmkisan.gov.in ವೆಬ್​​ಸೈಟ್​ಗೆ ಭೇಟಿ ನೀಡಿ, ಅಲ್ಲಿ Farmers Corner ಆಯ್ಕೆ ಮೇಲೆ ಕ್ಲಿಕ್​​​ ಮಾಡಿ ನಂತರ ಫಲಾನುಭವಿಗಳ ವಿವರದ ಮೇಲೆ ಕ್ಲಿಕ್ ಮಾಡಬೇಕು. ಪ್ರಮುಖವಾಗಿ ರಾಜ್ಯ, ಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡುವುದು ಕಡ್ಡಾಯವಾಗಿರುತ್ತದೆ.

error: Content is protected !!