ಉಪ್ಪಿನಂಗಡಿ ಹಿಜಾಬ್ ಧರಿಸಿ ಬಂದ್ದ ವಿದ್ಯಾರ್ಥಿನಿಯರ ಅಮಾನತು ಪ್ರಕರಣ ವರದಿ ಮಾಡಲು ತೆರಳಿದ್ದ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಮತಾಂಧ ವಿದ್ಯಾರ್ಥಿಗಳು

 

 

 

 

ಮಂಗಳೂರು:ಉಪ್ಪಿನಂಗಡಿ ಸರಕಾರಿ ಕಾಲೇಜಿನಲ್ಲಿ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ ವರದಿಗಾಗಿ ತೆರಳಿದ್ದ ಮಾಧ್ಯಮದ ಪ್ರತಿನಿಧಿಯೊಬ್ಬರನ್ನು ಪುಂಡ ವಿದ್ಯಾರ್ಥಿಗಳು ಕೋಣೆಯೊಳಗೆ ಕೂಡಿ ಹಾಕಿ ಹಲ್ಲೆಗೈದು ದಿಗ್ಬಂಧನದಲ್ಲಿರಿಸಿ ಮೊಬೈಲ್‌ ಕಸಿದು ವೀಡಿಯೋಗಳನ್ನು ಡಿಲೀಟ್‌ ಮಾಡಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ್ದ 6 ವಿದ್ಯಾರ್ಥಿನಿಯರನ್ನು ಕಾಲೇಜಿನ ಪ್ರಾಂಶುಪಾಲರು ಅಮಾನತುಗೊಳಿಸಿದ್ದು ಈ ಬಗ್ಗೆ ನಡೆಯುತಿದ್ದ ಪ್ರತಿಭಟನೆ ನಡೆಸುತಿದ್ದ
ವಿದ್ಯಾರ್ಥಿಗಳ ಗುಂಪು ಏಕಾಏಕಿ ವರದಿ ಮಾಡಲು ತೆರಳಿದ್ದ ಪತ್ರಕರ್ತರನ್ನು ಅಮಾನುಷವಾಗಿ ಕೂಡಿಹಾಕಿ ಹಲ್ಲೆ ನಡೆಸಿ ಬಲವಂತವಾಗಿ ಪ್ರತಿಭಟನೆಯ ವೀಡಿಯೋ ಡಿಲೀಟ್ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!