ಸೌತಡ್ಕ ದೇವಸ್ಥಾನದಲ್ಲಿ ಹಿಂದುಯೇತರ ವಾಹನ ಸಂಚಾರಕ್ಕೆ ನಿರ್ಬಂಧ..?

 

 

ಬೆಳ್ತಂಗಡಿ: ತಾಲೂಕಿನ ಪ್ರಸಿದ್ದ ಪುಣ್ಯಕ್ಷೇತ್ರ
ಶ್ರೀ ಮಹಾಗಣಪತಿ ದೇವಸ್ಥಾನ ಸೌತಡ್ಕ ವಠಾರದಲ್ಲಿ ವಿಶ್ವ ಹಿಂದು ಪರಿಷತ್ ಭಜರಂಗದಳ, ಹಿಂದು ಜಾಗರಣಾ ವೇದಿಕೆ  ಕೊಕ್ಕಡ  ಹೆಸರಿನಲ್ಲಿ ಸೂಚನಾ ಫಲಕವೊಂದನ್ನು ಅಳವಡಿಸಿ ಹಿಂದುಗಳ ಶ್ರದ್ಧಾ ಕೇಂದ್ರವಾದ ನಮ್ಮ ಊರಿನ ಪುಣ್ಯ ಕ್ಷೇತ್ರ ಸೌತಡ್ಕದಲ್ಲಿ ಅನ್ಯ ಕೋಮಿನವರು ಪ್ರವೇಶವನ್ನು ಮಾಡಿ ಭಕ್ತಾದಿಗಳನ್ನು ಲವ್ ಜಿಹಾದ್ ಹಾಗೂ ದುಷ್ಕ್ರತ್ಯ ನಡೆಸಿರುವುದು ಕಂಡು ಬಂದಿರುವುದರಿಂದ ಹಿಂದುಯೇತರ ಜನರ ಆಟೋ ಮತ್ತು ಟ್ಯಾಕ್ಸಿ ಇನ್ನಿತರ ಯಾವುದೇ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂಬ ಫಲಕ ಹಾಕಲಾಗಿದೆ. ಇದೀಗ ಈ ಬೋರ್ಡಿನ ಪೋಟೊ ಎಲ್ಲಾ ಕಡೆಗಳಲ್ಲಿ ವೈರಲ್ ಆಗುತಿದ್ದು  ಈ ಬಗ್ಗೆ ಜಿಲ್ಲಾಡಳಿತ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂದು ಕಾದುನೋಡಬೇಕಾಗಿದೆ.

error: Content is protected !!