ಬೆಳ್ತಂಗಡಿ:ಉಪ್ಪಿನಂಗಡಿ ಪ್ರಕರಣದಲ್ಲಿ ಪತ್ರಕರ್ತರ ವಿರುದ್ಧ ವಿದ್ಯಾರ್ಥಿನಿ ನೀಡಿದ ದೂರಿನಂತೆ ಜಾಮೀನು ರಹಿತ ಕೇಸ್ ದಾಖಲಿಸಿದ ಪೊಲೀಸರ ವಿರುದ್ದ ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ತಕ್ಷಣ ಪತ್ರಕರ್ತರ ಮೇಲಿನ ಕೇಸ್ ಹಿಂಪಡೆಯಬೇಕು ಎಂದು ಆಗ್ರಹಿಸಿ ಗೃಹ ಸಚಿವರಿಗೆ ಬೆಳ್ತಂಗಡಿ ತಹಶೀಲ್ದಾರ್ ಮೂಲಕ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗಣೇಶ್ ಶಿರ್ಲಾಲ್, ಕಾರ್ಯದರ್ಶಿ ಚೈತ್ರೇಶ್ ಇಳಂತಿಲ, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಜತೆ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.