ರೈತ ದೇಶದ ಆರ್ಥಿಕತೆಯ ಬೆನ್ನೆಲುಬು ನರೇಂದ್ರ ಮೋದಿಯವರಿಂದ ರೈತರಿಗೆ ಶಕ್ತಿ ತುಂಬುವ ಕೆಲಸ : ಶಾಸಕ ಹರೀಶ್ ಪೂಂಜ ಲಾಯಿಲದಲ್ಲಿ ರೈತ ಸಮಾವೇಶ ಹಾಗೂ ಸನ್ಮಾನ ಕಾರ್ಯಕ್ರಮ

 

 

 

ಬೆಳ್ತಂಗಡಿ :ದೇಶದ ಆರ್ಥಿಕತೆಯ ಬೆನ್ನೆಲುಬು ರೈತರಾಗಿದ್ದಾರೆ ಇವರಿಗೆ ನಿಜವಾದ ಶಕ್ತಿ ತುಂಬುವ ಕೆಲಸವನ್ನು ಕಳೆದ 8 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಮಾಡುತಿದ್ದಾರೆ. ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಮೇ 12 ರಂದು ಲಾಯಿಲ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 8ನೇ ವರ್ಷದ ಆಡಳಿತ ಸಂಭ್ರಮಾಚರಣೆ ಪ್ರಯುಕ್ತ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಹಮ್ಮಿಕೊಂಡ ರೈತ ಸಮಾವೇಶ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ರೈತರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

 

ದೇಶದಲ್ಲಿ ರಸ್ತೆಗಳು ಇನ್ನಿತರ ವಿಶೇಷ ಬದಲಾವಣೆಗಳಿಗೆ ನಾಂದಿ ಹಾಡಿದವರು ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯಾಗಿದ್ದಾರೆ. ಕೃಷಿಕರು ದೇಶದ ಬೆನ್ನೆಲುಬು ಎಂದು ನಿಜವಾದ ರೀತಿಯಲ್ಲಿ ತಿಳಿದುಕೊಂಡ ಪ್ರಧಾನಿಯವರು ಫಸಲ್ ಬೀಮಾ ಯೋಜನೆಯನ್ನು ಜಾರಿಗೆ ತಂದ್ದು ಕೃಷಿಕರಿಗೆ ಅರ್ಥಿಕವಾಗಿ ಶಕ್ತಿವಂತರಾಗಲು ಪ್ರೋತ್ಸಾಹ ನೀಡಿದ್ದಾರೆ.
ಬಿಜೆಪಿ‌ ಸರಕಾರ ಕೃಷಿಕರ ಜೀವನಕ್ಕೆ ಸರಕಾರಿ ವ್ಯವಸ್ಥೆಯಲ್ಲಿನ ಸವಲತ್ತುಗಳ ಮೂಲಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದೆ. ಈ ಮೂಲಕ ರೈತಾಪಿವರ್ಗದ ಆರ್ಥಿಕತೆ ಸುಧಾರಣೆಗೆ ನಾಂದಿ ಹಾಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.

 

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಮಾತನಾಡಿ, ದೇಶದ ಎಲ್ಲ ಜನತೆಗೆ ಸರಕಾರದ ಯೋಜನೆ ತಲುಪು ವಂತೆ ಮೋದಿ ಮಾಡಿದ್ದಾರೆ. ಬೆಳ್ತಂಗಡಿ ತಾಲೂಕು 4 ವರ್ಷಗಳಲ್ಲಿ ಹಿಂದೆ ಎಂದೂ ಕಾಣದ ಅಭಿವೃದ್ಧಿ ಹೊಂದಿದೆ ಎಂದರು.ಕಾರ್ಯಕ್ರಮದಲ್ಲಿ  ತಾಲೂಕಿನ  ಸುಮಾರು 300 ಮಂದಿ ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ

ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಎ.ವಿ. ತೀರ್ಥರಾಮ, ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಾಧಾಕೃಷ್ಣ
ಬೆಳ್ಳೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತ ಅನ್ನಳಿಕೆ,ಬಿಜೆಪಿ ಜಿಲ್ಲಾಉಪಾಧ್ಯಕ್ಷ ಕೊರಗಪ್ಪ ನಾಯ್ಕ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೊಟ್ಯಾನ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್, ಲಾಯಿಲ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಅಜಿತ್ ಕುಮಾರ್ ಆರಿಗ ಉಪಸ್ಥಿತರಿದ್ದರು.

ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಾಂತಪ್ಪ ಗೌಡ ಪ್ರಸ್ತಾಪಿಸಿದರು. ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಜಯಂತ್ ಗೌಡ  ಸ್ವಾಗತಿಸಿದರು. ರಾಜೇಶ್ ಪೆಂರ್ಬುಡ ಕಾರ್ಯಕ್ರಮ ನಿರೂಪಿಸಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ವಿ. ಪ್ರಸಾದ್ ವಂದಿಸಿದರು.

error: Content is protected !!