ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮನ :ಪುಸ್ತಕ ನೀಡಿ ಸ್ವಾಗತಿಸಿದ ಸಿಎಂ ಬಸವರಾಜ ಬೊಮ್ಮಾಯಿ

 

 

 

ಬೆಂಗಳೂರು: ಎರಡು ದಿನ ಕರ್ನಾಟಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿಳಿದರು. ಐಎಎಫ್ ವಿಶೇಷ ವಿಮಾನದಲ್ಲಿ ಯಲಹಂಕ ವಾಯು ನೆಲೆಗೆ ಆಗಮಿಸಿದ ಪ್ರಧಾನಿಗೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್, ಮಾಜಿ ಸಿಎಂ ಯಡಿಯೂರಪ್ಪ ಸ್ವಾಗತ ಕೋರಿದರು.

ಮೋದಿ ಅವರಿಗೆ ಶಾಲು ಹೊದಿಸಿ, ಪುಸ್ತಕ ನೀಡಿ ಸಿಎಂ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ  ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ .ಸಚಿವರಾದ ಆರ್ ಅಶೋಕ್, ಆರಗ ಜ್ಞಾನೇಂದ್ರ, ಮಾಧುಸ್ವಾಮಿ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು, ವಾಯು ಸೇನಾ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!