ಬೆಳ್ತಂಗಡಿ: ‘ಯೋಗಾಭ್ಯಾಸವು ನಮ್ಮ ದಿನಚರಿಯ ಅವಿಭಾಜ್ಯ ಅಂಗವಾಗಬೇಕು. ಅನೇಕ ಒತ್ತಡಗಳ ಮಧ್ಯೆ ಜೀವನ ಸಾಗಿಸುವ ಇಂದಿನ ಸಂದರ್ಭದಲ್ಲಿ ಪ್ರತಿ ದಿನ ಯೋಗಾಭ್ಯಾಸಕ್ಕಾಗಿ ಸಮಯ ಮೀಸಲಿಟ್ಟು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು’ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕ ಡಾl ಅಶ್ವಿನ್ ಹೇಳಿದರು
ಅವರು ಬೆಳ್ತಂಗಡಿ ಸಂತೋಮ್ ಟವರ್ ಸಭಾಂಗಣದಲ್ಲಿ 8 ನೇ ವಿಶ್ವ ಯೋಗ ದಿನಾಚರಣೆ ನಿಮಿತ್ತ ಶ್ರೀ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ನೇತೃತ್ವದಲ್ಲಿ ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಸದಸ್ಯರಿಗೆ 8 ದಿನಗಳ ಕಾಲ ನಡೆದ ಯೋಗ ತರಬೇತಿಯ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗಣೇಶ್ ಶಿರ್ಲಾಲು ವಹಿಸಿದ್ದರು.
ವೇದಿಕೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಹಾಯಕ ಪ್ರಾಧ್ಯಾಪಕ ಡಾl ಅರುಣ್ ಬಿ.ಆರ್., ಪ್ರವೀಣ್, ತರಬೇತುದಾರ ಉಲ್ಲಾಸ್ ಇದ್ದರು.
ಪತ್ರಕರ್ತರಾದ ದೇವಿಪ್ರಸಾದ್, ಮಂಜುನಾಥ್ ರೈ, ಮನೋಹರ್ ಬಳಂಜ ಯೋಗ ಶಿಬಿರದ ಅನುಭವವನ್ನು ವ್ಯಕ್ತಪಡಿಸಿದರು.
ತರಬೇತುದಾರ ಉಲ್ಲಾಸ್ ಇವರನ್ನು ಸಂಘದ ವತಿಯಿಂದ ಗೌರವಿಸಲಾಯಿತು
ಸಂಘದ ಕಾರ್ಯದರ್ಶಿ ಚೈತ್ರೇಶ್ ಇಳಂತಿಲ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.