ಪ್ರತ್ಯೇಕ ರಾಜ್ಯದ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

 

 

ದೆಹಲಿ: ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಬಸವರಾಜ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.ದೆಹಲಿಯಲ್ಲಿ ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು ಉಮೇಶ್ ಕತ್ತಿ ಹಲವಾರು ಬಾರಿ ಈ ರೀತಿಯ ಹೇಳಿಕೆಯನ್ನು ನೀಡುತಿದ್ದಾರೆ. ಈ ಬಗ್ಗೆ ಅವರನ್ನೇ ಕೇಳಬೇಕು. ಸರ್ಕಾರದ ಮುಂದೆ ಆ ರೀತಿಯಾದ ಯಾವುದೇ ಪ್ರಸ್ತಾಪಗಳಿಲ್ಲ ಎಂದು ತಿಳಿಸಿದ್ದಾರೆ.

error: Content is protected !!