ಬೆಳ್ತಂಗಡಿ:ಮಳೆ ಆರ್ಭಟ ಮುಂದುವರಿದ ಹಿನ್ನಲೆಯಲ್ಲಿ ನಾಳೆ (ಜು.1) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಆರೆಂಜ್ ಅಲರ್ಟ್ ಆಗಿದ್ದು, ಈ ಮಧ್ಯೆಯೂ ಮಳೆ ಬಿರುಸಾಗಿದೆ. ಮಂಗಳೂರು ನಗರ ಸೇರಿದಂತೆ ನಾನಾ ಕಡೆ ಮಹಾಮಳೆಗೆ ಜಲಾವೃತವಾಗಿದೆ. ಈ ಹಿನ್ನಲೆಯಲ್ಲಿ ಗುರುವಾರ ಮಧ್ಯಾಹ್ನ ಬಳಿಕ ಶಾಲಾ-ಕಾಲೇಜಿಗೆ ರಜೆ ಘೋಷಿಸಲಾಗಿದ್ದು, ಮಳೆ ಬಿರುಸು ಮುಂದುವರಿದ ಹಿನ್ನಲೆಯಲ್ಲಿ ಶುಕ್ರವಾರವೂ ರಜೆ ಘೋಷಿಸಲಾಗಿದೆ.
ಭಾರೀ ಮಳೆಯಿಂದಾಗಿ ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಚರಂಡಿ ಅವ್ಯವಸ್ಥೆಯಿಂದಾಗಿ ರಸ್ತೆಗಳಲ್ಲೆ ನೀರು ಹರಿದು ಹೋಗುತಿದ್ದು ವಾಹನ ಸವಾರರು ಪರದಾಡುವಂತಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಮನೆಗಳು ನೀರಿನಿಂದಾವೃತ್ತವಾಗಿವೆ.ಈ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ವಿವಿದ ರೀತಿಯಲ್ಲಿ ಟ್ರೋಲ್ ವಿಡಿಯೋಗಳು ಹರಿದಾಡುತ್ತಿವೆ.