ಬೆಳ್ತಂಗಡಿ ಭಾರೀ ಮಳೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ : ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಮರಗಳು:ತಗ್ಗು ಪ್ರದೇಶದ ತೋಟಗಳಿಗೆ ನೀರು ನುಗ್ಗುವ ಸಾಧ್ಯತೆ

 

 

ಬೆಳ್ತಂಗಡಿ: ಜಿಲ್ಲೆಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಮಳೆ ಹೆಚ್ಚಾಗಿದ್ದು ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ರಾತ್ರಿಯಿಂದ ವಿಪರೀತ ಮಳೆಯಾಗುತಿದ್ದು ತಾಲೂಕಿನಲ್ಲಿ ಹರಿಯುತ್ತಿರುವ ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ.

 

 

 

 

ನೇತ್ರಾವತಿ, ಮೃತ್ಯುಂಜಯ ನದಿಗಳ ನೀರಿನ ಹರಿವು ಹೆಚ್ಚಾಗಿದ್ದು ಮಳೆ ಹೀಗೆ ಮುಂದುವರಿದ್ದಲ್ಲಿ ತಗ್ಗು ಪ್ರದೇಶಗಳಿಗೆ ಹಾಗೂ ತೋಟಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಅದೇ ರೀತಿ ಕಿಂಡಿ ಅಣೆಕಟ್ಟುಗಳಲ್ಲಿ ಅಲ್ಲಲ್ಲಿ ಮರ ಕಸ ಕಡ್ಡಿಗಳು ಸಿಕ್ಕಿಹಾಕಿಕೊಂಡಿರುವುದರಿಂದ ಸರಾಗವಾಗಿ ನೀರು ಹರಿದು ಹೋಗಲು ಅಡಚಣೆಯಾಗುತಿದೆ.

 

 

 

ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ  ತಾಲೂಕಿನಲ್ಲಿ  ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ.

error: Content is protected !!