ಬೆಂಗಳೂರು:ಈಗಾಗಲೇ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನತೆ ಮತ್ತೆ ಬೆಲೆ ಏರಿಕೆ ಶಾಕ್‌ಗೆ ಒಳಗಾಗಿದ್ದಾರೆ. ಗೃಹ ಬಳಕೆಯ 14.2 ಕೆ.ಜಿ ಎಲ್‌ಪಿಜಿ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆಯಾಗಿದೆ. ಈ ದರವು ಇಂದಿನಿಂದಲೇ ದೇಶಾದ್ಯಂತ ಜಾರಿಗೆ ಬರಲಿದೆ.
ಈ ಹಿಂದೆ ಮೇ 19 ರಂದು ಗೃಹ, ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರವನ್ನು ಪ್ರತಿ ಸಿಲಿಂಡರ್‌ಗೆ 3.5 ರೂಪಾಯಿಯಷ್ಟು ಹೆಚ್ಚಿಸಲಾಗಿತ್ತು.ದೆಹಲಿಯಲ್ಲಿ ಸದ್ಯಕ್ಕೆ ಗೃಹ ಬಳಕೆಯ ಪ್ರತಿ ಸಿಲಿಂಡರ್ ದರ 1,053 ರೂ. ಆಗಿದೆ. 5 ಕೆಜಿಯ ಗೃಹ ಬಳಕೆ ಸಿಲಿಂಡರ್ ಬೆಲೆ ಸಹ ಹೆಚ್ಚಿಸಲಾಗಿದ್ದು, ಪ್ರತಿ ಸಿಲಿಂಡರ್‌ಗೆ 18 ರೂ. ಏರಿಕೆ ಮಾಡಲಾಗಿದೆ.
19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 8.50 ರೂ. ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ 1,005.50 ರೂ.ಗೆ ಲಭ್ಯವಾಗುತ್ತಿದೆ.ಇಂದಿನಿಂದ ರೂ 1055.50 ರೂ ಆಗಲಿದೆ.