ನಿಲ್ಲದ ಮಳೆ ಜಿಲ್ಲೆಯಲ್ಲಿ ರೆಡ್ ಆಲರ್ಟ್ ಮುಂದುವರಿಕೆ: ಶಾಲಾ ಕಾಲೇಜುಗಳಿಗೆ ಜು 09 ರವರೆಗೆ ರಜೆ

 

 

 

:

 

ಬೆಳ್ತಂಗಡಿ:ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತಿದ್ದು ಮುಂದಿನ‌ 48 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆಯಾಗುವ ಸಂಭವ ಇರುವುದರಿಂದ ರೆಡ್ ಅಲರ್ಟ್ ಮುಂದುವರಿಸಲಾಗಿದೆ.  ಅದೇ ರೀತಿ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಗಳಿರುವುದರಿಂದ  ದಕ್ಷಿಣ ಕನ್ನಡ ಎಲ್ಲಾ ಅಂಗನವಾಡಿ, ಪ್ರಾಥಮಿಕ,ಪ್ರೌಢ ಶಾಲೆ,ಪದವಿ ಪೂರ್ವ, ಸ್ನಾತಕೋತ್ತರ ಪದವಿ,ಡಿಪ್ಲೋಮಾ ಇಂಜಿನಿಯರಿಂಗ್,ಐಟಿಐ ಸೇರಿದಂತೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಿಗೆ ಜುಲೈ 08 ಮತ್ತು 09 ರಂದು ರಜೆ ಘೋಷಿಸಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ ,ನದಿ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆಯೂ ಸೂಚಿಸಲಾಗಿದೆ.ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಆಯಾಯ ತಾಲೂಕಿನ ಕೇಂದ್ರ ಸ್ಥಾನದಲ್ಲಿರಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೇ.ವಿ. ಆದೇಶ ನೀಡಿದ್ದಾರೆ.

 

ಅದೇ ರೀತಿ ಉಡುಪಿ ಜಿಲ್ಲೆಯಲ್ಲೂ ಎರಡು ದಿನ ರೆಡ್ ಅಲರ್ಟ್ ಘೋಷಣೆಯಾಗಿದ್ದು ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ನೀಡಲಾಗಿದೆ.

error: Content is protected !!