ತಾಲೂಕಿಗೆ ಸುಸಜ್ಜಿತ ಮಿನಿ ವಿಮಾನ ನಿಲ್ದಾಣದ ಚಿಂತನೆ: ಶಾಸಕ ಹರೀಶ್ ಪೂಂಜ ಬೆಳ್ತಂಗಡಿಯಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

 

 

 

ಬೆಳ್ತಂಗಡಿ: ತಾಲೂಕಿನಲ್ಲಿ ಇನ್ನಷ್ಟು ಅಭಿವೃದ್ಧಿ ಪರ ಚಿಂತನೆಗಳನ್ನು ನಡೆಸಲಾಗುತಿದ್ದು ತಾಲೂಕಿನಲ್ಲಿ ಸುಸಜ್ಜಿತವಾದ ಮಿನಿ ವಿಮಾನ ನಿಲ್ದಾಣ ನಿರ್ಮಾಣದ ಚಿಂತನೆಗಳಿದ್ದು ಈಗಾಗಲೇ ಈ ಬಗ್ಗೆ  ದೆಹಲಿಯಲ್ಲಿ ಸಂಸದರ ಮೂಲಕ ಮಾತುಕತೆ ನಡೆಸಲಾಗಿದೆ. ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ಅವರು ಬೆಳ್ತಂಗಡಿ ಮಂಜುನಾಥ ಕಲಾಭವನದಲ್ಲಿ ನರೇಂದ್ರ ಮೋದಿ ಆಡಳಿತದ 8ನೇ ವರ್ಷಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಕೆಲಸ ಕಳೆದ ನಾಲ್ಕು ವರ್ಷಗಳಿಂದ ಆಗುತ್ತಿದೆ.
1800 ಕೋಟಿಗಿಂತಲೂ ಅಧಿಕ ಅನುದಾನದ ಮೂಲಕ ತಾಲೂಕಿನ ಸಮಗ್ರ ಅಭಿವೃದ್ಧಿ ನಡೆಯುತ್ತಿದೆ. ಗ್ರಾಮ ಗ್ರಾಮಗಳನ್ನು ಸಂಪರ್ಕಿಸುವ ಉದ್ಧೇಶದಿಂದ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ.  ತಾಲೂಕಿನ ಅಭಿವೃದ್ಧಿಗಾಗಿ ಕ್ಷೇತ್ರದ ಜನರ ಹಿತದೃಷ್ಟಿಯಿಂದ ಇನ್ನಷ್ಟು ಜನರ ಕಾಲು ಹಿಡಿಯುತ್ತೇನೆ. ಕಳೆದ 70 ವರ್ಷಗಳಲ್ಲಿ ಆಗದಂತಹ ಅಭಿವೃದ್ಧಿ ಕೆಲಸ ಕಳೆದ ನಾಲ್ಕು ವರ್ಷಗಳಿಂದ ಆಗುತ್ತಿದೆ. ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಜಲಯಜ್ಙ ಕಾರ್ಯಕ್ರಮದ ಮೂಲಕ ತಾಲೂಕಿನ ವಿವಿಧೆಡೆಗಳಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಿ ಸಂಪರ್ಕ ಕೊಂಡಿಯೊಂದಿಗೆ ಅಂತರ್ಜಲ ಹೆಚ್ಚಿಸುವ ಕೆಲಸಗಳು ನಡೆಯುತ್ತಿದೆ.ಈ ಮೂಲಕ ನವ ಬೆಳ್ತಂಗಡಿ ನಿರ್ಮಾಣದ ಅಭಿವೃದ್ಧಿ ಕಾರ್ಯಗಳು ಸಾಂಗವಾಗಿ ನಡೆಯುತ್ತಿದೆ ಎಂದರು.

error: Content is protected !!