ಬೆಳ್ತಂಗಡಿ : ಗಲಾಟೆಯನ್ನು ತಪ್ಪಿಸಲು ಹೋದ ವ್ಯಕ್ತಿ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ಸಮೀಪದ ಇಂದಬೆಟ್ಟು ಬಳಿ ನಡೆದಿದೆ. ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದ ಮೇಲೆ ಓರ್ವನ ಮೇಲೆ ಹಲ್ಲೆ ಮಾಡಿದ್ದು ಇದನ್ನು ತಡೆಯಲು ಬಂದ ಸಂಬಂಧಿಕನೊಬ್ಬನ ಮೇಲೂ ಹಲ್ಲೆ ಮಾಡಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆ ಓರ್ವ ಸಾವನ್ನಪ್ಪಿರುವ ಘಟನೆ ಇಂದಬೆಟ್ಟು ಗ್ರಾಮದ ಪರಾರಿ ಶಾಂತಿನಗರ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪರಾರಿ ಶಾಂತಿನಗರದಲ್ಲಿ ನಾರಾಯಣ ನಾಯ್ಕ್(47) ಎಂಬವರು ಬೀಡಿ ಕೊಟ್ಟು ವಾಪಸ್ ಬರುವಾಗ ಶಾಂತಿನಗರ ಆಟದ ಮೈದಾನದಲ್ಲಿ ಯುವಕರ ಗುಂಪು ಅಡ್ಡಹಾಕಿ ನೀನು ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಿಯಾ ಎಂದು ಹೇಳಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಇದನ್ನು ನೋಡಿದ ನಾರಾಯಣ ನಾಯ್ಕ್ ಅವರ ಹೆಂಡತಿಯ ಅಕ್ಕನ ಗಂಡ ಜಾರಪ್ಪ ನಾಯ್ಕ್ (55) ಹಲ್ಲೆಯನ್ನು ತಪ್ಪಿಸಲು ಬಂದಾಗ ಅವರಿಗೂ ಮರಣಾಂತಿಕ ಹಲ್ಲೆ ಮಾಡಿದ್ದಾರೆ ಗಂಭೀರಗಾಯಗೊಂಡಿದ್ದ ಜಾರಪ್ಪ ನಾಯ್ಕ್ ಮತ್ತು ನಾರಾಯಣ ನಾಯ್ಕ್ ಇಬ್ಬರು ಅಸ್ವಸ್ಥರಾಗಿ ಬಿದ್ದಿದ್ದರು ಈ ಬಗ್ಗೆ ಸ್ಥಳೀಯರು ಮನೆಯವರಿಗೆ ಮಾಹಿತಿ ನೀಡಿದಾಗ ಜಾರಪ್ಪ ಅವರ ಮಗ ರಾಜಶೇಖರ್ ಬಂದು ವಾಹನದಲ್ಲಿ ಆಸ್ಪತ್ರೆಗೆ ಕರೆತರುತ್ತಿದ್ದಾಗ ದಾರಿ ಮಧ್ಯೆ ಜಾರಪ್ಪ ನಾಯ್ಕ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನಂತರ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು ನಾರಾಯಣ ನಾಯ್ಕ್ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಲ್ಲೆಮಾಡಿದ ಸ್ಥಳೀಯರ ಮೇಲೆ
ಬೆಳ್ತಂಗಡಿ ಠಾಣೆಯಲ್ಲಿ ಜಾರಪ್ಪ ನಾಯ್ಕ್ ಅವರ ಮಗ ರಾಜಶೇಖರ್ ದೂರು ನೀಡಿದ್ದಾರೆ.
.