ಬೆಳ್ತಂಗಡಿ ಸೇರಿದಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿ: ಆದೇಶ ಹೊರಡಿಸಿದ ಉಪವಿಭಾಗಾಧಿಕಾರಿ ಗಿರೀಶ್ ನಂದನ್: ಜುಲೈ27, 28ರ ಮಧ್ಯರಾತ್ರಿವರೆಗೆ 144 ಸೆಕ್ಷನ್

 

 

 

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಪುತ್ತೂರಿನಲ್ಲಿ ಸರಕಾರಿ‌ ಬಸ್ ಒಂದಕ್ಕೆ ಕಲ್ಲು ತೂರಾಟ ನಡೆಸಿದ ಹಿನ್ನೆಲೆ ಪುತ್ತೂರು ವಿಭಾಗ ವ್ಯಾಪ್ತಿಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಜುಲೈ 27 ಬೆಳಗ್ಗೆ 6 ಗಂಟೆಯಿಂದ 28ರ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರ ಅನ್ವಯ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕುಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಪುತ್ತೂರು ಉಪವಿಭಾಗಧಿಕಾರಿ ಗಿರೀಶ್ ನಂದನ್ ಆದೇಶ ಹೊರಡಿಸಿದ್ದಾರೆ.
ಬುಧವಾರ ಪ್ರವೀಣ್ ನೆಟ್ಟಾರ್ ಅವರ ಮೃತ ದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಿಂದ ಅವರ ಊರು ಮನೆಯಾದ ಬೆಳ್ಳಾರೆಗೆ ಕೊಂಡು ಹೋಗುವ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಹಿಂದು ಪರ ಸಂಘಟನೆಯವರು ಸೇರುವ ಹಾಗೂ ಮೆರವಣಿಗೆ ಮೂಲಕ ತೆರಳುತ್ತಿರುವ ಹಿನ್ನೆಲೆ‌, ಪರಿಸ್ಥಿತಿ ಬಿಗಡಾಯಿಸಿ ಘರ್ಷಣೆ ನಡೆಯವ ಸಾಧ್ಯತೆಯಿರುವ ಪೊಲೀಸ್ ಇಲಾಖೆ ವರದಿಯನ್ವಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಆದೇಶದನ್ವಯ ನಿಷೇದಾಜ್ಞೆ ಅವಧಿಯಲ್ಲಿ ಸಾರ್ವಜನಿಕರು 5 ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವಂತಿಲ್ಲ. ಯಾವುದೇ ರೀತಿಯ ಆಯುಧ, ದೈಹಿಕ ದಂಡನೆಗೆ ಕಾರಣವಾಗುವ ವಸ್ತುಗಳನ್ನು ಹೊಂದುವುದು, ಸಾರ್ವಜನಿಕ ಮೆರವಣಿಗೆ, ಸಭೆ, ಸಮಾರಂಭ ನಡೆಸುವುದು, ಕೋಮು ಸೌಹಾರ್ದಕ್ಕೆ ಧಕ್ಕೆ ಬರುವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಅಥವಾ ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ.

error: Content is protected !!