ನಾಳೆ ಜು 28 ದ.ಕ ಜಿಲ್ಲೆಯಲ್ಲಿ ಯಾವುದೇ ರೀತಿಯ ಬಂದ್ ಇಲ್ಲ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಸ್ಪಷ್ಟನೆ:

 

 

 

ಬೆಳ್ತಂಗಡಿ: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಪ್ರವೀಣ್ ನೆಟ್ಟಾರು ಹತ್ಯೆಗೀಡಾದ ಹಿನ್ನೆಲೆಯಲ್ಲಿ ದ.ಕ ಜಿಲ್ಲೆ ಬಂದ್ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಯಾವುದೇ ರೀತಿಯ ಬಂದ್ ಇರುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸ್ಪಷ್ಟನೆ ನೀಡಿದೆ.
ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಪರಿವಾರ ಸಂಘಟನೆ ವತಿಯಿಂದ ಜುಲೈ 28 ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ರೀತಿಯ ಬಂದ್ ಗೆ ಕರೆ ಕೊಟ್ಟಿರುವುದಿಲ್ಲ ಅದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸಂದೇಶವನ್ನು ನಂಬದೇ ತಮ್ಮ ದೈನಂದಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಬಜರಂಗದಳ  ಸ್ಪಷ್ಟನೆ ನೀಡಿದೆ.

error: Content is protected !!