ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ,ಇಬ್ಬರ ಬಂಧನ: ಝಾಕೀರ್ , ಶಾಫಿಕ್ ಪೊಲೀಸ್ ವಶಕ್ಕೆ: ಇಂದು ಬೆಳ್ಳಾರೆಗೆ ಭೇಟಿ ನೀಡಲಿರುವ ಸಿಎಂ ಬಸವರಾಜ ಭೊಮ್ಮಾಯಿ:

 

 

 

ಸುಳ್ಯ: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯು ಪ್ರಗತಿಯಲ್ಲಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮತ್ತು ಪೊಲೀಸ್​ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಝಕೀರ್ ಮತ್ತು ಮಹಮ್ಮದ್ ಶಫಿಕ್ ಎಂಬವರನ್ನು ಬಂಧಿಸಿರುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳಲ್ಲಿ ಶಫಿಕ್ ಬೆಳ್ಳಾರೆ ಮತ್ತು ಝಕೀರ್ ಸವಣೂರು ನಿವಾಸಿ ಎನ್ನಲಾಗಿದೆ. ಝಕೀರ್ ಮೇಲೆ ಈ ಹಿಂದೆ ಒಂದು ಕ್ರಿಮಿನಲ್ ಕೇಸ್ ಇದೆ. ಈ ಇಬ್ಬರ ಸಂಘಟನೆ ಹಿನ್ನೆಲೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಕೊಲೆಗೆ ಸ್ಪಷ್ಟ ಕಾರಣದ ಬಗ್ಗೆ, ಇನ್ನೂ ಯಾರಾದರೂ ಇದ್ದಾರಾ ಎಂಬ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಎಸ್​ಪಿ ತಿಳಿಸಿದ್ದಾರೆ.ಇದೇ ವೇಳೆ ಮಾತನಾಡಿದ ಕಾನೂನು ಸುವ್ಯಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಈಗಾಗಲೇ ಸುಮಾರು 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಅವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಹತ್ಯೆಯ ಬಗ್ಗೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಸಿಎಂ ಭೇಟಿ
: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ 3:30ಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ತೆರಳಲಿದ್ದಾರೆ. ನಂತರ ಸುಳ್ಯದ ಬೆಳ್ಳಾರೆಯಲ್ಲಿನ ಪ್ರವೀಣ್​ ನಿವಾಸಕ್ಕೆ ತೆರಳಿ ಕುಟುಂಬಸ್ಥರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!