ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನಲ್ಲಿ ಬಿಗಿಬಂದೋಬಸ್ತ್ ಪೊಲೀಸರಿಂದ ಪಥ ಸಂಚಲನ:

 

 

 

ಬೆಳ್ತಂಗಡಿ:ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಯಾವುದೇ ಗಲಭೆ ಉಂಟಾಗದಂತೆ ಶಾಂತಿ ಸುವ್ಯವಸ್ಥೆ ಕಾಪಾಡಲು ತಾಲೂಕಿನಾದ್ಯಂತ ಪೊಲೀಸರು ಬಿಗಿ ಬಂದೋಬಸ್ತ್​ ಕೈಗೊಂಡಿದ್ದಾರೆ. ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್​ಪಿ ಋಷಿಕೇಶ್ ಸೋನಾವಣೆ ಅವರ ಸೂಚನೆಯಂತೆ ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಮತ್ತು ಉಪ ನಿರೀಕ್ಷಕ ನಂದ ಕುಮಾರ್ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಪೊಲೀಸ್ ವೃತ್ತದ 5 ಠಾಣೆಗಳ ಪೊಲೀಸರು ಹಾಗೂ ರಾಜ್ಯ ಮೀಸಲು  ಸಶಸ್ತ್ರ ಪಡೆಯ ಪೊಲೀಸರು ಬೆಳ್ತಂಗಡಿ ನಗರದಲ್ಲಿ ಪಥ ಸಂಚಲನ ನಡೆಸಿದರು. ಈಗಾಗಲೇ ಹತ್ಯೆಗೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತಿದ್ದಾರೆ.

error: Content is protected !!