ಮಂಗಳೂರು: ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಸಾಮಾನ್ಯ ಜನರ ಓಡಾಟದ ಮಧ್ಯೆಯೇ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ,
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳ್ಳಾರೆಗೆ ಭೇಟಿ ನೀಡಿ ಮೃತ ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಬೆನ್ನಲ್ಲೇ ಈ ಘಟನೆ ವರದಿಯಾಗಿದೆ. ಸುರತ್ಕಲ್ನ ಮಂಗಳಪೇಟೆ ನಿವಾಸಿ ಫಾಝಿಲ್ ಕೊಲೆಯಾದ ಯುವಕ. ಇವರು ಸುರತ್ಕಲ್ನಲ್ಲಿ ಜವಳಿ ಅಂಗಡಿಯ ಮುಂಭಾಗದಲ್ಲಿ ನಿಂತುಕೊಂಡಿದ್ದ ವೇಳೆ ದುಷ್ಕರ್ಮಿಗಳು ಕಾರಿನಲ್ಲಿ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಪಾಝಿಲ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಫಾಝಿಲ್ ಮೃತಪಟ್ಟಿದ್ದಾನೆ.
ಈಗಾಗಲೇ ಬೆಳ್ಳಾರೆಯಲ್ಲಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ಬೆನ್ನಲ್ಲೆ ಮತ್ತೊಂದು ಕೊಲೆ ನಡೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ.ಸುರತ್ಕಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.