ಬೆಳ್ತಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ.ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ , ಸಹಯೋಗದಲ್ಲಿ ಗ್ರಾಮ ಪಂಚಾಯತ್ ಉಜಿರೆ ವತಿಯಿಂದ 75 ನೇ ಅಮೃತ ಮಹೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಗ್ರಾಮ ಪಂಚಾಯಿತಿ ಗ್ರಂಥಾಲಯದ “ಓದುವ ಬೆಳಕು” ಕಾರ್ಯಕ್ರಮದ ಅಂಗವಾಗಿ ಗ್ರಾಮ ಚದುರಂಗ ಆಟ ಆಡೋಣ ಅಭಿಯಾನವು ಉಜಿರೆ ಗ್ರಾಮ ಪಂಚಾಯಿತಿಯ ಸುವರ್ಣ ಸೌಧ ಸಭಾಂಗಣದಲ್ಲಿ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಚದುರಂಗ (ಚೆಸ್) ಆಟ ನಡೆಯಿತು. ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಧರ್ ಉದ್ಘಾಟಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಪುಷ್ಪವತಿ. ಆರ್ .ಶೆಟ್ಟಿ ಉಪಾಧ್ಯಕ್ಷ ರವಿ ಬರಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಛ , ಗ್ರಾ.ಪಂ ಸದಸ್ಯರುಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಬ್ದಿಕ್ ವರ್ಮ ಅವರ ನೇತೃತ್ವದಲ್ಲಿ ನಡೆದ ಸ್ಪರ್ಧೆಯಲ್ಲಿ ಒಟ್ಟು 140 ಮಕ್ಕಳು ಭಾಗವಹಿಸಿದ್ದರು.ವಿಜೇತರಾದ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಅಲ್ಲಿಂದ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಲಿದ್ದಾರೆ.