ಧರ್ಮಸ್ಥಳದಲ್ಲಿ ಡಾ.ಹೆಗ್ಗಡೆಯವರ ಸಂಸದರ ಕಾರ್ಯಾಲಯ ಉದ್ಘಾಟನೆ : ಧರ್ಮಸ್ಥಳದಲ್ಲಿ ಮಂಜುಷಾ ವಸ್ತುಸಂಗ್ರಹಾಲಯ ಬಳಿಯ ಕಟ್ಟಡದಲ್ಲಿ ಕಾರ್ಯಾರಂಭ

 

 

 

ಬೆಳ್ತಂಗಡಿ: ಪ್ರಧಾನಿಯವರಿಂದ ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡು ಪ್ರಮಾಣವಚನ ಸ್ವೀಕರಿಸಿ ಈಗಾಗಲೆ ಎರಡು ಅಧಿವೇಶನಗಳಲ್ಲಿ ಭಾಗವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ (ಸಂಸದರ) ನೂತನ ಕಾರ್ಯಾಲಯ ನಾಳೆ ಆ 11 ಗುರುವಾರ ಬೆಳಿಗ್ಗೆ 10 ಗಂಟೆಗೆ ಧರ್ಮಸ್ಥಳದ ಮಂಜುಷಾ ವಸ್ತುಸಂಗ್ರಹಾಲಯದ ಬಳಿ ಇರುವ ಕಟ್ಟಡದಲ್ಲಿ ಶುಭಾರಂಭಗೊಳ್ಳುತ್ತದೆ ಎಂದು ಮಾನ್ಯ ಸಂಸದರ ಆಪ್ತ ಕಾರ್ಯದರ್ಶಿ ಕೆ.ಎನ್ ಜನಾರ್ದನ್ ಮತ್ತು ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ತಿಳಿಸಿದ್ದಾರೆ.
ಶಾಸಕ ಹರೀಶ್ ಪೂಂಜ ನೂತನ ಕಾರ್ಯಾಲಯವನ್ನು ಉದ್ಘಾಟಿಸಲಿದ್ದು. ಪೂಜ್ಯ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಶಾಸಕರಾದ ಕೆ. ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್ ಕುಮಾರ್ ಶುಭಾಶಂಸನೆ ಮಾಡುವರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

error: Content is protected !!