ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ಆಮೃತ ಮಹೋತ್ಸವ:

 

 

ಬೆಳ್ತಂಗಡಿ: 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಾಣಿ ಶಿಕ್ಷಣ ಸಂಸ್ಥೆ ಸಂಭ್ರಮದಿಂದ ಆಚರಿಸಿತು.
ಧ್ವಜಾರೋಹಣ ಮಾಡಿ ಸಂದೇಶ ನೀಡಿದ ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ, ನಾವೆಲ್ಲರೂ ಅನುಭವಿಸುತ್ತಿರುವ ಸ್ವಾತಂತ್ರ್ಯ ಹಲವಾರು ವೀರಪುರುಷರು ಮತ್ತು ವೀರ ವನಿತೆಯರ ತ್ಯಾಗ ಬಲಿದಾನದ ಕೊಡುಗೆ ಎಂದು ಸ್ವಾತಂತ್ರ್ಯ ಸೇನಾಧಿಗಳನ್ನು ಸ್ಮರಿಸಿದರು. ಮುಂದಿನ ತಲೆಮಾರು ರಾಷ್ಟ್ರಭಕ್ತಿಯ ಕಾರ್ಯಕ್ರಮಗಳಲ್ಲಿ ತಮ್ಮನ್ನು ಸದಾ ತೊಡಗಿಸಿಕೊಂಡು ಈ ರಾಷ್ಟ್ರವನ್ನು ಕಟ್ಟಿದ ಮಹಾ ಚೇತನಗಳನ್ನು ಸದಾ ಸ್ಮರಿಸುವ ಕೆಲಸ ಮಾಡಬೇಕೆಂದು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು ಲ. ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ ಗೌಡ, ಜೊತೆ ಕಾರ್ಯದರ್ಶಿ ಶ್ರೀನಾಥ್ ಕೆ. ಎಂ., ಶಿಕ್ಷಣ ಸಂಸ್ಥೆಗಳ ಸದಸ್ಯೆ ಉಷಾ ವೆಂಕಟರಮಣ ಗೌಡ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಯದುಪತಿ ಗೌಡ, ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯರಾದ ಲಕ್ಷ್ಮಿನಾರಾಯಣ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸುಹಾಸಿನಿ, ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ನಾರಾಯಣಗೌಡ, ಉಪಾಧ್ಯಕ್ಷೆ ಉಷಾ ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು.
ಕಾಲೇಜಿನ ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ. ಕಾರ್ಯಕ್ರಮ ನಿರ್ವಹಿಸಿದರು.
ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳು ಹಾಗೂ ಪ್ರೌಢಶಾಲೆಗಳಿಗೆ ಏರ್ಪಡಿಸಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.
ವಾಣಿ ಶಿಕ್ಷಣ ಸಂಸ್ಥೆಯ ಎರಡು ಸಾವಿರದಷ್ಟು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಗಳಾದರು.

error: Content is protected !!