ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಸಾರ್ವಜನಿಕ ಸಭೆ: ಜಿಲ್ಲೆಯ ಪ್ರತೀ ತಾಲೂಕಿನಿಂದ 25 ಸಾವಿರ ಜನ ಸೇರುವ ನಿರೀಕ್ಷೆ:

 

 

 

ಮಂಗಳೂರು:  ಸೆಪ್ಟೆಂಬರ್ 2ರಂದು ಪ್ರಧಾನಿ ನರೇಂದ್ರ ಮೋದಿ  ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಮಂಗಳೂರಿನಲ್ಲಿ ಸರ್ಕಾರಿ ಮತ್ತು ಪಕ್ಷದ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಎಂಎನ್ಎಂಪಿಟಿಯಲ್ಲಿ ಸಾಗರಮಾಲಾ ಯೋಜನೆಗೆ ಚಾಲನೆ ನೀಡಲಿದ್ದಾರೆ‌.

ಪ್ರಧಾನಿ ಮೋದಿಯವರು ಆಗಮಿಸುತ್ತಿರುವುದು ಬಿಜೆಪಿ ಪಾಳಯದಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ನಗರದ ಬಂಗ್ರಕೂಳೂರಿನಲ್ಲಿ ಇರುವ ಗೋಲ್ಡ್ ಪಿಂಚ್ ಸಿಟಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ‌. ಈ ಸಾರ್ವಜನಿಕ ಸಭೆಯಲ್ಲಿ ಈಗಾಗಲೇ ದಕ್ಷಿಣ ಕ‌ನ್ನಡ ಜಿಲ್ಲೆಯ ಪ್ರತಿ ತಾಲೂಕಿನಿಂದ 25 ಸಾವಿರ ಮಂದಿ ಸೇರಿಸುವ ನಿರೀಕ್ಷೆ ಇದೆ.

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಬಳಿಕ ಬಿಜೆಪಿ ವಿರುದ್ಧ ಕಾರ್ಯಕರ್ತರೇ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಮೇಲೆಯೂ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಆಗಮಿಸುತ್ತಿರುವುದು ರಾಜ್ಯ ಬಿಜೆಪಿಯಲ್ಲಿ ಹುರುಪು ಮೂಡಿಸಲಿದೆ.

error: Content is protected !!