ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದಿಂದ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆ:

 

ಬೆಳ್ತಂಗಡಿ : ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಗುರುವಾಯನಕೆರೆಯಿಂದ ಬೆಳ್ತಂಗಡಿ ಬಸ್ ನಿಲ್ದಾಣದವರೆಗೆ ಸ್ವಾತಂತ್ರ್ಯ ನಡಿಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು ಕಾಂಗ್ರೆಸ್ ಕಾರ್ಯಕರ್ತರು ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಕ್ಕಾಗಿ ಹೋರಾಡಿದ ಪಕ್ಷ ದೇಶವನ್ನು ಕಟ್ಟಿದ ಪಕ್ಷವಾಗಿದೆ.

 

 

 

ಸಮಾನತೆಯ ಸಹೋದರತೆಯ ಭಾವನೆಯಲ್ಲಿ ಕಾಂಗ್ರೆಸ್ ಪಕ್ಷ ದೇಶವನ್ನು ಕಟ್ಟುವ ಕಾರ್ಯ ಮಾಡಿದೆ. ಆದರೆ ಇಂದು ಜಾತಿಯ, ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿದ್ದು ಅದನ್ನು ಎದುರಿಸಿ ನಿಲ್ಲುವ ಅಗತ್ಯವಿದೆ ಎಂದರು. ಜವಹರ್‌ಲಾಲ್ ನೆಹರೂರವರು ಪ್ರಧಾನಿಯಾದ ನಂತರ ಆಧುನಿಕ ಭಾರತವನ್ನು ಸೃಷ್ಠಿಸಿದರು. ಇಂದಿರಾ ಗಾಂಧಿಯವರು ಆರ್ಥಿಕ ಶಕ್ತಿಯನ್ನು ನೀಡಿದರೆ ಲಾಲ್ ಬಹದ್ದೂರ್ ಶಾಸ್ತ್ರಿಯವರು ಜೈ ಜವಾನ್ ಜೈ ಕಿಸಾನ್ ಘೋಷಣೆಯ ಮೂಲಕ ರೈತರ ಬೆನ್ನೆಲುಬಾಗಿ ನಿಂತರು.
ಕಾಂಗ್ರೇಸ್ ಜಿಲ್ಲಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಮಾತನಾಡಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ನೆನಪಿಸಲು ಮತ್ತು ಸಮಾಜದಲ್ಲಿ ಶಾಂತಿ ನೆಲೆಸಲು ಕಾಂಗ್ರೇಸ್ ಪಕ್ಷವು ರಾಜ್ಯಾದ್ಯಂತ ಕಾಲ್ನಡಿಗೆ ಜಾಥ ಮಾಡುತ್ತಿದ್ದು ಇದರ ಭಾಗವಾಗಿ ಬೆಳ್ತಂಗಡಿಯಲ್ಲೂ ಕಾಲ್ನಡಿಗೆ ಜಾಥ ನಡೆಯುತ್ತಿದೆ ಎಂದರು.

 

ಜಾಥಾಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಚಾಲನೆ ನೀಡಿದರು. ಮಾಜಿ ಸಚಿವ ಕೆ ಗಂಗಾಧರ ಗೌಡ, ಕಾಂಗ್ರೇಸ್ ಜಿಲ್ಲಾ ಉಸ್ತುವಾರಿಗಳಾದ ಕೃಷ್ಣಮೂರ್ತಿ, ಧೀರಜ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರುಗಳಾದ ರಂಜನ್ ಜಿ ಗೌಡ, ಶೈಲೇಶ್ ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಜಿ.ಪಂ ಮಾಜಿ ಸದಸ್ಯರುಗಳಾದ ಶೇಖರ್ ಕುಕ್ಕೇಡಿ, ನಮಿತಾ, ಶಾಹುಲ್ ಹಮೀದ್, ಧರಣೇಂದ್ರ ಕುಮಾರ್, ರಾಜಶೇಖರ ಅಜ್ರಿ, ಎಪಿಎಂಸಿ ಮಾಜಿ ಅಧ್ಯಕ್ಷ ಸತೀಶ್ ಕುಮಾರ್, ಯೂತ್ ಕಾಂಗ್ರೇಸ್ ಜಿಲ್ಲಾ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ನಗರ ಬ್ಲಾಕ್ ಕಾಂಗ್ರೇಸ್ ವಕ್ತಾರ ಮನೋಹರ್ ಕುಮಾರ್ ಎ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರುಗಳಾದ ಆಶ್ರಫ್ ನೆರಿಯ, ಸಲೀಂ ಗುರುವಾಯನಕೆರೆ, ತಾಲೂಕು ಯುವ ಕಾಂಗ್ರೇಸ್ ಅಧ್ಯಕ್ಷ ಅನೀಲ್ ಪೈ, ತಾ.ಪಂ ಮಾಜಿ ಸದಸ್ಯ ಗೋಪಿನಾಥ್, ನ.ಪಂ ಸದಸ್ಯ ಜಗದೀಶ್ ಡಿ., ದ.ಕ ಜಿಲ್ಲಾ ಕಾಂಗ್ರೇಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಕರೀಂ ಗೇರುಕಟ್ಟೆ, ಮಾಲಾಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಬೇಬಿ ಸುವರ್ಣ, ಮುಖಂಡರುಗಳಾದ ಬಿ.ಕೆ ವಸಂತ್, ಚಂದು ಎಲ್, ಪ್ರವೀಣ್ ಗೌಡ, ಮೊದಲಾದವರು ಉಪಸ್ಥಿತರಿದ್ದರು.

error: Content is protected !!