ಮೇಲಂತಬೆಟ್ಟು ಕಾಲೇಜು ತನಕ ಬಸ್ಸ್ ವ್ಯವಸ್ಥೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶಾಸಕರಿಗೆ ಮನವಿ:

 

ಬೆಳ್ತಂಗಡಿ: ಮೇಲಂತಬೆಟ್ಟು ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್ಸಿನ ವ್ಯವಸ್ಥೆ ಮಾಡಬೇಕಾಗಿ ಬೆಳ್ತಂಗಡಿ ಶಾಸಕರಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಮಿಯಾರಿನಿಂದ ಹೊರಡುವ ಬಸ್ಸಿನಲ್ಲಿ ಅಧಿಕ ಸಂಖ್ಯೆಯಲ್ಲಿ ಮೇಲಂತಬೆಟ್ಟು ಕಾಲೇಜಿಗೆ ವಿದ್ಯಾರ್ಥಿಗಳು ಆಗಮಿಸುತಿದ್ದು ಈ ಬಸ್ಸನ್ನು ಕಾಲೇಜು ತನಕ ಬರುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ .ಈ ಬಗ್ಗೆ ಸ್ಪಂದಿಸಿದ ಶಾಸಕ ಹರೀಶ್ ಪೂಂಜ  ಅಧಿಕಾರಿಗಳಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವ  ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

 

error: Content is protected !!