ಲಾಯಿಲ ಗ್ರಾಮದಲ್ಲಿ ಚಿರತೆ ಹಾವಳಿ: ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ:ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯುವ ಭರವಸೆ:

 

ಬೆಳ್ತಂಗಡಿ: ಲಾಯಿಲ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಚಿರತೆ ದಾಳಿಯಿಂದಾಗಿ ಸಾಕು ಪ್ರಾಣಿಗಳು ಬಲಿಯಾಗುತಿದ್ದು. ಸ್ಥಳೀಯರು  ಆತಂಕ ಪಡುವಂತಾಗಿತ್ತು ಈ ಬಗ್ಗೆ ಅರಣ್ಯ ಇಲಾಖೆಗೆ ಸಾರ್ವಜನಿಕರು ದೂರು ನೀಡಿದ್ದು ಅದಲ್ಲದೇ ಪ್ರಜಾಪ್ರಕಾಶ ನ್ಯೂಸ್ ವರದಿ ಪ್ರಕಟಿಸಿತ್ತು.ಈ ಬಗ್ಗೆ ಇಂದು  ಅಧಿಕಾರಿಗಳು ದಾಳಿ ನಡೆದ ಕೆಲವು ಕಡೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರಲ್ಲದೇ ಚಿರತೆಯ ಚಲನವಲನಗಳನ್ನು ಗಮನಿಸಿ ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯುವ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಎಂದು ತಿಳಿದು ಬಂದಿದೆ. ಕಳೆದ ಕೆಲವು ದಿನಗಳಿಂದ ಲಾಯಿಲ ಗ್ರಾಮದ ಹಂದೆವೂರು ಬೈಲು , ಲಾಯಿಲ ಬೈಲು, ಗಾಣದ ಕೊಟ್ಟಿಗೆ ಸೇರಿದಂತೆ ಸುತ್ತಮುತ್ತಲಿನಿಂದ ಸುಮಾರು 10 ಕ್ಕಿಂತಲೂ ಅಧಿಕ ನಾಯಿಗಳನ್ನು ರಾತ್ರಿ ಸಮಯದಲ್ಲಿ ಚಿರತೆ ದಾಳಿ ನಡೆಸಿ ಕೊಂಡೊಯ್ಯುತಿದ್ದು ಸ್ಥಳೀಯರು ತಮ್ಮ ಸಾಕು ಪ್ರಾಣಿಗಳನ್ನು ಯಾವ ರೀತಿ ರಕ್ಷಿಸಿಕೊಳ್ಳಬಹುದು ಎಂಬ ಬಗ್ಗೆ ಚಿಂತಾಕ್ರಾಂತರಾಗಿದ್ದರು. ಸಂಬಂಧಪಟ್ಟ ಅರಣ್ಯ ಇಲಾಖೆಯವರು ಬಂದು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರಿಂದ ನಿಟ್ಟುಸಿರು ಬಿಡುವಂತಾಗಿದೆ.

error: Content is protected !!