ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಯ ಸಹೋದರನಿಂದ ಕೊಲೆ ಬೆದರಿಕೆ: ಬೆಳ್ಳಾರೆ ಠಾಣೆಯ ಮುಂದೆ ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ:

 

 

 

ಸುಳ್ಯ : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಶಫೀಕ್ ಎಂಬಾತನ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತ ನೋರ್ವನಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿದರು.

ಹಿಂದೂ ಸಂಘಟನೆಯ ಕಾರ್ಯಕರ್ತ ಪ್ರಶಾಂತ್ ರೈ ಎಂಬವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಶಫೀಕ್ ಸಹೋದರ, ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಶನಿವಾರ ಸಂಜೆ ಪ್ರಶಾಂತ್ ರೈಯವರಿಗೆ ಕರೆ ಮಾಡಿರುವ ಸಫ್ರಿದ್ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿಯೂ, ಕೊಲ್ಲುವುದಾಗಿ ಬೆದರಿಸಿರುವುದಾಗಿಯೂ ಆರೋಪಿಸಲಾಗಿದೆ. ಈ ಬಗ್ಗೆ ಪ್ರಶಾಂತ್ ಬಳಿ ಆಡಿಯೋ ರೆಕಾರ್ಡ್ ಇದೆ ಎನ್ನಲಾಗಿದೆ .

ಪ್ರಶಾಂತ್ ಅವರು ಈ ಬಗ್ಗೆ ದೂರು ನೀಡಲು ಠಾಣೆಗೆ ತೆರಳಿರುವುದಾಗಿ ಹೇಳಲಾಗಿದ್ದು, ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ಹಿಂದೂ ಸಂಘಟನೆಯ ಕಾರ್ಯಕರ್ತರು ಬೆಳ್ಳಾರೆಯ ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ್ದರು. ಸಫ್ರೀದ್​​ನನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸಿದರು. ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!