ಬೆಳ್ತಂಗಡಿ:ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಮಳೆಗೆ ಅಲ್ಲಲ್ಲಿ ಗುಂಡಿಗಳು ಬಿದಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ಕುವೆಟ್ಟು ಬಿಜೆಪಿ ಕಾರ್ಯಕರ್ತರು ಗುರುವಾಯನಕೆರೆಯಿಂದ ಜೈನ್ ಪೇಟೆ ತನಕ ರಸ್ತೆಯಲ್ಲಿ ಇರುವ ಗುಂಡಿಗಳನ್ಬು ಶ್ರಮದಾನದ ಮೂಲಕ ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ..
ಶ್ರಮದಾನದಲ್ಲಿ ಭಾರತೀಯ ಜನತಾಪಾರ್ಟಿಯ ಕುವೆಟ್ಟು ಶಕ್ತಿ ಕೇಂದ್ರದ ಎಲ್ಲಾ ಕಾರ್ಯಕರ್ತರು ಭಾಗವಹಿಸಿದ್ದರು.ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿ ವರೆಗೆ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು ಮಳೆಯಿಂದಾಗಿ ದುರಸ್ತಿಗೊಳಿಸಲು ತೊಂದರೆಯಾಗುತ್ತಿದೆ. ಮಳೆ ಸ್ವಲ್ಪ ಕಡಿಮೆಯಾದ ಕೂಡಲೇ ದುರಸ್ತಿ ಕೆಲಸ ನಡೆಯಲಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈಗಾಗಲೇ ಗುರುವಾಯನಕೆರೆಯಿಂದ ಉಜಿರೆಯವರೆಗೆ ಚತುಷ್ಪಥ ಇನ್ನುಳಿದಂತೆ ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ದ್ವಿಪಥ ರಸ್ತೆ ನಿರ್ಮಾಣವಾಗಲಿದೆ. ಇದಕ್ಕಾಗಿ 718 ಕೋ. ರೂ ಅನುದಾನ ಬಿಡುಗಡೆಗೊಂಡಿದ್ದು ಇದರ ಟೆಂಡರ್ ಪ್ರಕ್ರಿಯೆಯೂ ಮುಗಿದಿದ್ದು ನವಂಬರ್ ತಿಂಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.