ಬೆಳ್ತಂಗಡಿ, ಅಕ್ರಮ ಗೋ ಸಾಗಾಟ :ಪಿಕಪ್ ಸಹಿತ ಆರೋಪಿಯ ಬಂಧನ:

 

 

 

ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಅಕ್ರಮ ಗೋ ಸಾಗಾಟ ಮಾಡುತಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಮಂಜಲಪಲ್ಕೆ ಹಟತ್ತೋಡಿ ನಿವಾಸಿ ಸುಂದರ ಮೂಲ್ಯ(59) ಎಂಬಾತನಾಗಿದ್ದು. ಈತನು ಪಿಕಪ್ ವಾಹನದಲ್ಲಿ ಸವಣಾಲು ಗ್ರಾಮದಿಂದ ಹಿಂಸಾತ್ಮಕ ರೀತಿಯಲ್ಲಿ ದನವನ್ನು ತುಂಬಿಕೊಂಡು ಮೇಲಂತಬೆಟ್ಟು ಕ್ರಾಸ್ ಬಳಿ ಬರುತ್ತಿದ್ದಾಗ ಗುರುವಾರ ಬೆಳಗ್ಗೆ 9:15 ರ ಸುಮಾರಿಗೆ ಬೆಳ್ತಂಗಡಿ ಪೊಲೀಸರು ವಾಹನವನ್ನು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ದನವನ್ನು ಸಾಗಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ.ತಕ್ಷಣ ಆರೋಪಿ ಸುಂದರ ಮೂಲ್ಯ ನನ್ನು ಬಂಧಿಸಿದ್ದಾರೆ. ಸಾಗಾಟಮಾಡುತ್ತಿದ್ದ ದನ ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಪಿಕಪ್ ವಾಹನವನ್ನು ವಶಕ್ಕೆ ಪಡೆಯಲಾಗಿದ್ದು ಇದರ ಒಟ್ಟು ಮೌಲ್ಯ 1, 60 ಲಕ್ಷ ಎಂದು ಅಂದಾಜಿಸಲಾಗಿದೆ ಬೆಳ್ತಂಗಡಿ ಠಾಣೆಯಲ್ಲಿ ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಕೊಳ್ಳಲಾಗಿದೆ. ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

error: Content is protected !!