ಬಂಟ್ವಾಳ: ಅಪರಿಚಿತ ಮಹಿಳೆಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಸರಪಾಡಿ ಗ್ರಾಮದ sez ನೀರಿನ ಸ್ಥಾವರದ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಕಂಡುಬರುತಿದೆ ,
ಚೂಡಿದಾರ್, ಪ್ಯಾಂಟ್ ಧರಿಸಿದ ಮಹಿಳೆ ಅಥವಾ ಯುವತಿ ಎಂಬುದು ಸರಿಯಾಗಿ ತಿಳಿಯಲು ಸಾಧ್ಯವಾಗುತ್ತಿಲ್ಲ, ಆದರೆ ನೀರಿಗೆ ಬಿದ್ದು ಎರಡು ದಿನಗಳಾಗಿರಬಹುದು ಎಂಬ ಸಂಶಯ ಮೇಲ್ನೋಟಕ್ಕೆ ಕಂಡುಬರುತ್ತಿದೆ
ಸ್ಥಳೀಯರು ಪೋಲಿಸರಿಗೆ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.