ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿ ಜೀವ ಬೆದರಿಕೆ ಪ್ರಕರಣ: ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಾರು ಸಹಿತ ಆರೋಪಿ ಪೊಲೀಸ್ ವಶಕ್ಕೆ:

 

 

 

 

 

 

ಬೆಳ್ತಂಗಡಿ; ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಜೀವಬೆದರಿಕೆ ಹಾಕಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಪೋಲೀಸರು ಬಂಧಿಸಿದ್ದಾರೆ.
ಮಂಗಳೂರು ಪಳ್ನೀರು ನಿವಾಸಿ ರಿಯಾಜ್ ಎಂಬಾತನನ್ನು ಪೋಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ .ಹೃಷಿಕೇಶ್ ಭಗವಾನ್ ಸೋನಾವಣೆ ಮಾದ್ಯಮಕ್ಕೆ ಮಾಹಿತಿ ನೀಡಿದರು.
ಗುರುವಾರ ರಾತ್ರಿ
ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿ ದ ಬಂಟ್ವಾಳ ಪೋಲೀಸರು ಸ್ಕಾರ್ಫಿಯೋ ವಾಹನ ಸಹಿತ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಕುರಿತು ಮಾಹಿತಿ ನೀಡಿದ ಅವರು ಆರೋಪಿ ವಿರುದ್ದ ಈ ವರೆಗೆ ಯಾವುದೇ ಕ್ರಿಮಿನಲ್ ಪ್ರಕರಣ ಗಳು ದಾಖಲಾಗಿಲ್ಲ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

error: Content is protected !!