ಧರ್ಮಸ್ಥಳ ಕ್ಷೇತ್ರ ಹಾಗೂ ವೀರೇಂದ್ರ ಹೆಗ್ಗಡೆ ಬಗ್ಗೆ ಸುಳ್ಳು ಸುದ್ದಿ ಪ್ರಕರಣ :ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಸೋಮನಾಥ್ ನಾಯಕ್ ಕೋರ್ಟಿಗೆ ಶರಣು: ಮೂರು ತಿಂಗಳ ಸಜೆ, 4.5 ಲಕ್ಷ ಪರಿಹಾರ, ನೀಡಲು ಆದೇಶ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸಂಸ್ಥೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಬರವಣಿಗೆ ಮತ್ತು ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿರುವ ಸೋಮನಾಥ್ ನಾಯಕ್ ಅವರಿಗೆ ಮೂರು ತಿಂಗಳ ಸಜೆ ಹಾಗೂ 4.5 ಲಕ್ಷ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಇಂದು 3 ಗಂಟೆಗೆ CJ &JMFC ಬೆಳ್ತಂಗಡಿ ನ್ಯಾಯಾಧೀಶರಾದ ವಿಜಯೇಂದ್ರರ ಮುಂದೆ ಸೋಮನಾಥ್ ನಾಯಕ್ ಹಾಜರಾದರು .

ಶ್ರೀ ಕ್ಷೇತ್ರ ಧರ್ಮಸ್ಥಳ ಅಥವಾ ಸಂಸ್ಥೆಯ ಕುರಿತು ಗೌರವಕ್ಕೆ ಚ್ಯುತಿ ತರುವಂತಹ ಯಾವುದೇ ರೀತಿಯ ಬರವಣಿಗೆ ಅಥವಾ ಹೇಳಿಕೆ ನೀಡಬಾರದೆಂದು ಬೆಳ್ತಂಗಡಿ ನ್ಯಾಯಾಲಯ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಸೋಮನಾಥ್ ನಾಯಕ್ ಸೇರಿದಂತೆ ಐದು ಜನರಿಗೆ ಆದೇಶ ಮಾಡಿತ್ತು ಆದ್ರೆ ಇದನ್ನು ಮೀರಿ ಮತ್ತೆ ಸೋಮನಾಥ್ ನಾಯಕ್ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ವೈರಲ್ ಮಾಡಿರುವುದಕ್ಕಾಗಿ ಬೆಳ್ತಂಗಡಿ ನ್ಯಾಯಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಸೋಮನಾಥ್ ನಾಯಕ್ ದೋಷಿ ಎಂದು ಪರಿಗಣಿಸಿ ಮೂರು ತಿಂಗಳ ಸಜೆ ಮತ್ತು 4.5 ಲಕ್ಷ ಪರಿಹಾರ ನೀಡಬೇಕೆಂದು ಆದೇಶ ಮಾಡಿತ್ತು. ಅದಲ್ಲದೆ ಸೋಮನಾಥ್ ನಾಯಕ್ ಸೇರಿದ ಆಸ್ತಿ ಸಹ ಮುಟ್ಟುಗೋಲು ಹಾಕಿಕೊಂಡಿತು.

ಬೆಳ್ತಂಗಡಿ ನ್ಯಾಯಲಯದ ಆದೇಶ ವಿರುದ್ಧ ಸೋಮನಾಥ್ ನಾಯಕ್ ಬೆಳ್ತಂಗಡಿ ಹೆಚ್ಚುವರಿ ನ್ಯಾಯಾಲಯಲ್ಲಿ, ಹೈಕೋರ್ಟ್ , ಸುಪ್ರೀಂ ಕೋರ್ಟ್ ಗಳಲ್ಲಿ ವಕೀಲರ ಮೂಲಕ ಅಪೀಲು ಸಲ್ಲಿಸಿದ್ದರು. ಆದರೆ ಎಲ್ಲಾ ನ್ಯಾಯಾಲಯದಲ್ಲಿ ಅಪೀಲನ್ನು ವಜಾ ಮಾಡಿ ಬೆಳ್ತಂಗಡಿ ನ್ಯಾಯಾಲಯದ ಮೊದಲು ನೀಡಿದ್ದ ಅದೇಶವನ್ನು ಎತ್ತಿಹಿಡಿದಿತ್ತು. ಹೀಗಾಗಿ ಇಂದು ಬೆಳ್ತಂಗಡಿ ಕೋರ್ಟ್ ಗೆ ಸೋಮನಾಥ್ ನಾಯಕ್ ಹಾಜರಾಗಿದ್ದು ಈ ವೇಳೆ ಸುಮಾರು 70 ಕ್ಕೂ ಅಧಿಕ ಬೆಂಬಲಿಗರು ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಮಾಜಿ ಶಾಸಕರಾದ ಕೆ.ವಸಂತ ಬಂಗೇರ , ಚಿಂತಕರಾದ ಲಕ್ಷ್ಮೀಶ ತೋಳ್ಪಡಿತ್ತಾಯ, ರಂಜನ್ ರಾವ್ ಯರ್ಡೂರು, ಡಿಎಸ್ ಸ್ ಮುಖಂಡರು ಹಾಗೂ ಮತ್ತಿತರ ಸಂಘಟನೆಯ ಕಾರ್ಯಕರ್ತರು ಜೊತೆಯಲ್ಲಿದ್ದರು.


ಬೆಳ್ತಂಗಡಿ ಕೋರ್ಟ್ ನಿಂದ ಸೋಮನಾಥ್ ನಾಯಕ್ ಅವರನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.

error: Content is protected !!