ನ.08ರಂದು 2022ರ ಕೊನೆಯ ಚಂದ್ರಗ್ರಹಣ: ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ದೇವಾಲಯದಲ್ಲಿ ಪೂಜಾ ಸಮಯ ಬದಲು: ಭಕ್ತಾಧಿಗಳಿಗಾಗಿ ದೇವಾಲಯದಿಂದ ಪ್ರಕಟಣೆ

ದ.ಕ: ನಾಳೆ 2022ರ ಕೊನೆಯ ಚಂದ್ರಗ್ರಹಣ ಸಂಭವಿಸಲಿದ್ದು ಹೀಗಾಗಿ ಧರ್ಮಸ್ಥಳ ಹಾಗೂ ಸುಬ್ರಹ್ಮಣ್ಯ ದೇವಾಲಯದಲ್ಲಿ ಪೂಜಾ ಸಮಯವನ್ನು ಬದಲಾಯಿಸಲಾಗಿದೆ.

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕ್ಷೇತ್ರದಲ್ಲಿ ನಾಳೆ (ನ.08) ಮಧ್ಯಾಹ್ನ 01.30 ರಿಂದ ರಾತ್ರಿ 7 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನ ಮತ್ತು ಯಾವುದೇ ಪೂಜೆಗೆ ಅವಕಾಶ ಇಲ್ಲ. ಆದರೆ ಮಧ್ಯಾಹ್ನ 1.30ರವರೆಗೆ ಭೋಜನ ವ್ಯವಸ್ಥೆ ಇರಲಿದೆ. ಬಳಿಕ ಸಂಜೆ 7ರ ನಂತರ ಭೋಜನ ಇರಲಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು ಬೆಳಗ್ಗೆ 9 ಗಂಟೆಯಿಂದ 11.30ರ ತನಕ ಹಾಗೂ ರಾತ್ರಿ 7.30ರಿಂದ 9ರ ತನಕ ದರ್ಶನಕ್ಕೆ ಸಮಯ ನಿಗದಿ ಪಡಿಸಲಾಗಿದೆ. ಆದರೆ ಭೋಜನ ಪ್ರಸಾದ ವಿತರಣೆ ಇರುವುದಿಲ್ಲ.

ಗ್ರಹಣವು 2.39ರಿಂದ ಸ್ಪರ್ಶವಾಗಿ 6.28ರ ವೇಳೆಗೆ ಮೋಕ್ಷವಾಗುತ್ತದೆ. ಹೀಗಾಗಿ ಈ ಸಮಯದಲ್ಲಿ ಕ್ಷೇತ್ರದಲ್ಲಿ ಯಾವುದೇ ಸೇವೆ ನಡೆಯುವುದಿಲ್ಲ. ಮಧ್ಯಾಹ್ನದ ಮಹಾಪೂಜೆ ಬೆಳಗ್ಗೆ 8:00ಕ್ಕೆ ಮತ್ತು ರಾತ್ರಿಯ ಮಹಾಪೂಜೆ, ಬಂಡಿ ಉತ್ಸವವು ಗ್ರಹಣ ಮೋಕ್ಷದ ನಂತರವೇ ನಡೆಯಲಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.

error: Content is protected !!