ಮಕ್ಕಳ ಮೇಲೆ ಹೆಚ್ಚಾಗುತ್ತಿರುವ ಲೈಂಗಿಕ ದೌರ್ಜನ್ಯ: ಶ್ರೀ. ಧ. ಮಂ. ಹಿ. ಪ್ರಾ. ಶಾಲೆ ಉಜಿರೆಯಲ್ಲಿ ಮಕ್ಕಳಿಗೆ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ: ಶಿಕ್ಷಣ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಆಶ್ರಯದಲ್ಲಿ ಕಾರ್ಯಕ್ರಮ.

ಉಜಿರೆ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ , ಶ್ರೀ ಧರ್ಮಸ್ಥಳ ಮಂಜುನಾಥ ಹಿರಿಯ ಪ್ರಾಥಮಿಕ ಶಾಲೆ ಉಜಿರೆಯಲ್ಲಿ ಪೋಕ್ಸೋ ಕಾಯ್ದೆ ಬಗ್ಗೆ ಮಕ್ಕಳಿಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಶಿಕ್ಷಣ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಇವರ ಆಶ್ರಯ ದಲ್ಲಿ, ಶ್ರೀ. ಧ. ಮಂ. ಹಿ . ಪ್ರಾ. ಶಾಲೆ ಉಜಿರೆ ಇವರ ಸಹಕಾರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ. ಆರ್. ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಮಕ್ಕಳ ಮಾಸೋತ್ಸವ ಅಂಗವಾಗಿ ಈ ಮಾಹಿತಿ ಕಾರ್ಯಕ್ರಮ ನಡೆದಿದ್ದು, ಶಿಕ್ಷಣ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ಇದರ ಅಧ್ಯಕ್ಷೆ ವಿನುತ ರಜತ್ ಗೌಡರವರು ಮಕ್ಕಳ ಸುರಕ್ಷತೆಗಿರುವ ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ನಂದಿನಿ ಶೆಟ್ಟಿ ಮತ್ತು ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

ಶಿಕ್ಷಣ ಸಂಪನ್ಮೂಲ ಕೇಂದ್ರದ ಕಾರ್ಯದರ್ಶಿ ಹಾಗೂ ಶಾಲಾ ಶಿಕ್ಷಕಿ ಪುಷ್ಪಾ ಶ್ರೀನಿವಾಸ ಗೌಡ ಸ್ವಾಗತಿಸಿ, ಶಾಲಾ ಶಿಕ್ಷಕ ವಿರಾಜ್ ಜೈನ್ ವಂದಿಸಿ, ಶಿಕ್ಷಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

error: Content is protected !!