ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವವು ನ 19 ರಿಂದ 23 ರವರೆಗೆ ನಡೆಯಲಿದ್ದು ಪೂರ್ವಭಾವಿ ಸಿದ್ಧತೆಯ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಆರೋಗ್ಯ ಇಲಾಖೆ, ಕೆಎಸ್ ಆರ್ ಟಿಸಿ, ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಯಾವುದೇ ರೀತಿಯಲ್ಲೂ ಬರುವ ಭಕ್ತಾಧಿಗಳಿಗೆ ತೊಂದರೆ, ಲೋಪವಾಗದಂತೆ ಅದೇ ರೀತಿ ಎಲ್ಲಿಯೂ ವಾಹನ ದಟ್ಟಣೆಯಾಗದಂತೆ ವ್ಯವಸ್ಥಿತ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಧರ್ಮಸ್ಥಳದ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು.