ಸುಬ್ರಹ್ಮಣ್ಯ ನದಿಯಲ್ಲಿ ಮುಳುಗಿ ಇಬ್ಬರು ಸಾವು:

 

 

ಸುಬ್ರಮಣ್ಯ : ಸುಬ್ರಮಣ್ಯ ಸಮೀಪದ ಯೇನೆಕಲ್ಲಿನ ಮುಖ್ಯರಸ್ತೆಯ ಸೇತುವೆಯ ಕೆಳಭಾಗದಲ್ಲಿ ನದಿ ನೀರಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.ಮೃತಪಟ್ಟವರನ್ನು ಧರ್ಮಪಾಲ ಪರಮಲೆ (46) ಹಾಗೂ ಚೊಕ್ಕಾಡಿಯ ಬೆಳ್ಯಪ್ಪ(49) ಎಂದು ಗುರುತಿಸಲಾಗಿದೆ. ಧರ್ಮಪಾಲ ಎಂಬವರು ಕೆಲವು ಸಮಯಗಳಿಂದ ಸುಬ್ರಹ್ಮಣ್ಯದ ಗ್ರಾ.ಪಂ.ನಲ್ಲಿ ಕಸ ವಿಲೇವಾರಿ ಘಟಕದಲ್ಲಿ ದಿನಕೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಹೊಳೆಯಲ್ಲಿದ್ದ ಪಂಪಿನ ಫೂಟ್‌ವಾಲ್ ತೆಗೆಯಲು ನೀರಿಗಿಳಿದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ‌ ಮುಳುಗಿರಬಹುದೆಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಇಬ್ಬರ ಮೃತದೇಹಗಳನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ.

error: Content is protected !!