ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಮುಂಡಾಜೆ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಆಯ್ಕೆ: ಕ್ರೀಡಾಪಟುಗಳಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ: ಹಾವೇರಿಯಲ್ಲಿ ನಡೆದ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ವಿದ್ಯಾರ್ಥಿನಿಯರು

ಮುಂಡಾಜೆ: ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ಮುಂಡಾಜೆ ಶಿಕ್ಷಣ ಸಂಸ್ಥೆಗಳ ಮುಂಡಾಜೆ ಅನುದಾನಿತ ಪ್ರೌಢಶಾಲೆಯ ವಿದ್ಯಾರ್ಥಿನಿಯರನ್ನು ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.

ಹಾವೇರಿಯಲ್ಲಿ ನಡೆದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಈ ಶಾಲೆಯ ಸಹನಾ, ವರ್ಷಾ, ರೇಷ್ಮಾ ಬಿ.ಕೆ, ಕೀರ್ತಿ, ಧನ್ಯಾ, ಗೌತಮಿ ಗೌಡ,ನಿತ್ಯಶ್ರೀ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ ಎಂಎಸ್, ಸಂದೀಪ್ ಶೆಟ್ಟಿ ಹಾಗೂ ಬಾಲಕೃಷ್ಣ ಇವರು ತರಬೇತುದಾರರಾಗಿದ್ದಾರೆ.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯ ಚಂದ್ರ, ಸಂಚಾಲಕ ನಾರಾಯಣಗೌಡ, ಖಜಾಂಜಿ ರವಿ ಮಂಡ್ಯ, ಸದಸ್ಯರಾದ ಭಾರತಿ ಫಡಕೆ,ರೇವತಿ ಮುಂಡಾಜೆ ಪ್ರೌಢಶಾಲೆಯ ಮುಖ್ಯಸ್ಥೆ ಜಯಂತಿ ಟಿ, ಕಾಲೇಜ್ ವಿಭಾಗದ ಪ್ರಿನ್ಸಿಪಾಲ್ ಜಾಲಿ ಡಿಸೋಜಾ ಸಮ್ಮುಖದಲ್ಲಿ ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಯಿತು.

error: Content is protected !!