ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ: ಕ್ಷೇತ್ರಕ್ಕೆ ಸಚಿವೆ ಸ್ಮೃತಿ ಇರಾನಿ ಭೇಟಿ: ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಸಚಿವೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ನಡೆಯುತ್ತಿದ್ದು ಇಂದು ಕ್ಷೇತ್ರಕ್ಕೆ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಭೇಟಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಚಿವೆಯನ್ನು ಡಿ. ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ. ಶ್ರೇಯಸ್ ಕುಮಾರ್, ನೀತಾ ರಾಜೇಂದ್ರ ಕುಮಾರ್ ಮತ್ತು ಎಂ.ಎಲ್.ಸಿ. ಪ್ರತಾಪಸಿಂಹ ನಾಯಕ್‌ರವರು ಗೌರವಪೂರ್ವಕವಾಗಿ ಸ್ವಾಗತಿಸಿದರು. ಬಳಿಕ ಸಚಿವೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

error: Content is protected !!