ನಿಡ್ಲೆ ಬೊಲೆರೊ ವಾಹನಕ್ಕೆ ಬಸ್ಸ್ ಡಿಕ್ಕಿ : ಓರ್ವ ಸಾವು ; ಮಗು ಸೇರಿದಂತೆ 7 ಮಂದಿಗೆ ಗಂಭೀರ ಗಾಯ

 

 

ಬೆಳ್ತಂಗಡಿ : ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು , ಮಗು ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ ಸಮೀಪದ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ನಡೆದಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂತಿದ್ದವರಿಗೆ ಹಾಗೂ ಬೊಲೋರೊ ವಾಹನಕ್ಕೆ ಡಿಕ್ಕಿ ಹೊಡೆದಿದೆ ಈ ವೇಳೆ ಮಂಡ್ಯ ಜಿಲ್ಲೆಯ ಚೆನ್ನಸಾಂದ್ರ ನಿವಾಸಿಯಾದ ಮಾಹದೇವ(63) ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ಜನ ಮಹಿಳೆಯರು , ಓರ್ವ ಗಂಡಸು ,ಒಂದು ಮಗು ಸೇರಿ ಏಳು ಮಂದಿಗೆ ಗಂಭೀರ ಗಾಯವಾಗಿದ್ದು ಇವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

error: Content is protected !!