ಮಡಂತ್ಯಾರ್ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಸಾವು: ಎರಡು ದಿನದಲ್ಲಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ದಾರುಣ ಸಾವು:

 

 

 

 

ಬೆಳ್ತಂಗಡಿ:  ಕಾಲೇಜು ವಿದ್ಯಾರ್ಥಿಯೊಬ್ಬ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.

 

 

 

ಮಡಂತ್ಯಾರು ಸೆಕ್ರೆಡ್ ಹಾರ್ಟ್ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಹರ್ಷಿತ್ ಎಂಬ ವಿದ್ಯಾರ್ಥಿ ಸಂಜೆ ಕಾಲೇಜು ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವ ಸಂದರ್ಭ ಬಳ್ಳಮಂಜ ರಸ್ತೆಯ ಬ್ರಹ್ಮಗಿರಿ ಎಂಬಲ್ಲಿ ರಿಕ್ಷಾ ಹಾಗೂ ಲಾರಿಗೆ ತಾಗಿ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡೋಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.ಅದರೆ ಅಲ್ಲಿ ಚಿಕಿತ್ಸೆ ಫಲಾಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಒಂದೇ ವಾರದಲ್ಲಿ ಒಂದೆ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಪಘಾತದಲ್ಲಿ ಸಾವನ್ನಪ್ಪಿರುವುದು ಎಲ್ಲರನ್ನೂ ಚಿಂತೆಗೊಳಪಡಿಸಿದೆ.

error: Content is protected !!