ಉಡುಪಿ: ಖಾಸಗಿ ಬಸ್ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 2 ವರ್ಷದ ಮಗು ಸೇರಿ ದಂಪತಿ ಸಾವನ್ನಪ್ಪಿರುವ ಘಟನೆ ನೆಲ್ಲಿಕಾರು ಎಂಬಲ್ಲಿ ನಡೆದಿದೆ
ಮೃತರು ಆಂಧ್ರಪ್ರದೇಶ ಮೂಲದ ನಾಗರಾಜ್ (40), ಪ್ರತ್ಯುಷಾ (32) ಮೃತದಂಪತಿ ಎಂದು ತಿಳಿದುಬಂದಿದೆ.
ನಾಗರಾಜ್ ಮತ್ತು ಪ್ರತ್ಯುಷಾ ದಂಪತಿ ತಮ್ಮ ಎರಡು ವರ್ಷದ ಮಗುವಿನೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದರು. ಮಗುವಿನ ಜೊತೆ ದಂಪತಿಗಳು ಕಾರಿನಲ್ಲಿ ಧರ್ಮಸ್ಥಳಕ್ಕೆ ಬಂದಿದ್ಧರು. ಅಲ್ಲಿಂದ ಶೃಂಗೇರಿಗೆ ತೆರಳುತ್ತಿದ್ದಾಗ ನೆಲ್ಲಿಕಾರು ಗ್ರಾಮದ ಬಳಿ ಈ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡ ಪರಿಶೀಲನೆ ನಡೆಸಿದ್ದು, ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.